ನವದೆಹಲಿ: ಮೂರು ಬಾರಿ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸತತ ಎರಡನೇ ಅವಧಿಗೆ ಲೋಕಸಭೆ ಸ್ಪೀಕರ್ ಆಗಿ ಬುಧವಾರ ಮರು ಆಯ್ಕೆಯಾಗಿದ್ದಾರೆ. ಬಳಿಕ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಸ್ಮರಿಸಿದರು.
“ಈ ಸದನವು 1975 ರಲ್ಲಿ ತುರ್ತು ಪರಿಸ್ಥಿತಿ ಹೇರುವ ನಿರ್ಧಾರವನ್ನು ಬಲವಾಗಿ ಖಂಡಿಸುತ್ತದೆ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ, ಹೋರಾಡಿದ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸುವ ಜವಾಬ್ದಾರಿಯನ್ನು ಪೂರೈಸಿದ ಎಲ್ಲ ಜನರ ಸಂಕಲ್ಪವನ್ನು ನಾವು ಪ್ರಶಂಸಿಸುತ್ತೇವೆ” ಎಂದು ಬಿರ್ಲಾ ಹೇಳಿದರು.
ತುರ್ತು ಪರಿಸ್ಥಿತಿಯ ಬಗ್ಗೆ ಬಿರ್ಲಾ ಅವರು ಮಾತಾಡುತ್ತಿದ್ದಂತೆ ಪ್ರತಿಪಕ್ಷಗಳಿಂದ ಪ್ರತಿಭಟನೆ ವ್ಯಕ್ತವಾಯಿತು. ಇದರಿಂದ ಕಲಾಪವನ್ನು ಮುಂದೂಡಲಾಯಿತು.
ಬಿರ್ಲಾ ಅವರು ತಮ್ಮ ಭಾಷಣದಲ್ಲಿ ರಾಷ್ಟ್ರಕ್ಕಾಗಿ ಕೆಲಸ ಮಾಡಲು ಸಂಸತ್ ಸದಸ್ಯರಲ್ಲಿ ಏಕತೆ ಇರಬೇಕು ಎಂದು ಕರೆ ನೀಡಿದರು ಮತ್ತು ಸಂಸತ್ತಿನಲ್ಲಿ ಪ್ರತಿಭಟನೆ ಮತ್ತು ಬೀದಿಗಳಲ್ಲಿ ಪ್ರತಿಭಟನೆ ನಡೆಸುವುದರ ನಡುವೆ ವ್ಯತ್ಯಾಸವನ್ನು ಗುರುತಿಸುವ ಮೂಲಕ ಸದನದ ಘನತೆ ಕಾಪಾಡುವಂತೆ ಮನವಿ ಮಾಡಿದರು.
ಬಳಿಕ ಮೋದಿ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡಿದ ಬಿರ್ಲಾ ಅವರ ಕ್ರಮವನ್ನು ಶ್ಲಾಘಿಸಿದರು. “50 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿದ್ದರೂ ಇಂದಿನ ಯುವಕರು ಅದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ತುರ್ತು ಪರಿಸ್ಥಿತಿಯು ಸಂವಿಧಾನವನ್ನು ಹತ್ತಿಕ್ಕಿತು, ಸಾರ್ವಜನಿಕ ಅಭಿಪ್ರಾಯವನ್ನು ಹತ್ತಿಕ್ಕಿತು ಮತ್ತು ಸಂಸ್ಥೆಗಳನ್ನು ದುರ್ಬಲಗೊಳಿಸಿತು. ತುರ್ತು ಪರಿಸ್ಥಿತಿಯ ಘಟನೆಗಳು ಸರ್ವಾಧಿಕಾರದ ಸ್ವರೂಪವನ್ನು ಸ್ಪಷ್ಟವಾಗಿ ವಿವರಿಸುತ್ತವೆ” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.