ನವದೆಹಲಿ: ಭಾರತೀಯ ಕ್ರಿಕೆಟ್ ತಡ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಟಿ20 ವಿಶ್ವಕಪ್ ಟ್ರೋಫಿಯನ್ನು ಬರೋಬ್ಬರಿ 17 ವರ್ಷಗಳ ಬಳಿಕ ಮುಡಿಗೇರಿಸಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾಗೆ ಶುಭಾಶಗಳ ಮಹಾಪೂರವೇ ಹರಿದು ಬರುತ್ತಿದೆ.
ವೆಸ್ಟ್ ಇಂಡೀಸ್ನ ಬ್ರಿಡ್ಜ್ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ನಾಲ್ಕು ಓವರ್ ಗಳು ರಣರೋಚಕತೆಯಿಂದ ಕೂಡಿದ್ದವು. ಅಂತಿಮವಾಗಿ ಭಾರತ 7 ರನ್ ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿದೆ. ಇದು ಟೀಂ ಇಂಡಿಯಾದ ಎರಡನೇ ಟಿ20 ವಿಶ್ವಕಪ್ ಟ್ರೋಫಿ ಆಗಿದೆ. ಇನ್ನು 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿತ್ತು.
ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾಗೆ ವಿಡಿಯೋ ಸಂದೇಶದ ಮೂಲಕ ಶುಭಾಶಯ ತಿಳಿಸಿದ್ದಾರೆ.
ಎಕ್ಸ್ನಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ಗೆದ್ದಿರುವುದು ನಮಗೆ ಹೆಮ್ಮೆ ತಂದಿದೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನಿಗೂ ದೊಡ್ಡ ವಿಜಯವಾಗಿದೆ. ಭಾರತೀಯ ಆಟಗಾರರು ವಿಶ್ವಕಪ್ ಟ್ರೋಫಿ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದಾರೆ. ಒಂದೇ ಒಂದು ಪಂದ್ಯವನ್ನು ಸೋಲದೆ ಈ ದಿಗ್ವಿಜಯವನ್ನು ಸಾಧಿಸಿರುವ ತಂಡಕ್ಕೆ ಅನಂತ ಅಭಿನಂದನೆಗಳು ಎಂದು ಹೇಳಿದ್ದಾರೆ.
CHAMPIONS!
Our team brings the T20 World Cup home in STYLE!
We are proud of the Indian Cricket Team.
This match was HISTORIC. 🇮🇳 🏏 🏆 pic.twitter.com/HhaKGwwEDt
— Narendra Modi (@narendramodi) June 29, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.