ಮಂಗಳೂರು: ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರುವಂತೆ ಸಮುದ್ರತೀರದ ಮನೆಮಂದಿ ಬಳಿ ಸಂಸದರು ಮನವಿ ಮಾಡಿದ್ದಾರೆ ಹಾಗೂ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚಿಸುವ ಜೊತೆಗೆ ಸಾಧ್ಯವಾಗುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಪೋರ್ಟ್ ಎಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಎಮ್ಇಐ ಮಾಜಿ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.