ನವದೆಹಲಿ: ಟಿ20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ಬಾರ್ಬಡೋಸ್ನಿಂದ ದೆಹಲಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತವನ್ನು ಪಡೆಯಿತು.
ಪುರುಷರ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ರಾಷ್ಟ್ರ ರಾಜಧಾನಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಆಟಗಾರರು ಬರುತ್ತಿದ್ದಂತೆ ಚಪ್ಪಾಳೆ ತಟ್ಟಿ ಸ್ವಾಗತಿಸಿದರು.
ಬಳಿಕ ತಂಡ ಮುಂಬೈಗೆ ತೆರಳುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ವಿಶ್ವಕಪ್ ಅನ್ನು ಅವರಿಗೆ ತೋರಿಸಿ ಸಂಭ್ರಮಿಸಿತು. ಈ ವೇಳೆ ಮೋದಿ ಕೂಡ ಆಟಗಾರರನ್ನು ಅಭಿನಂದಿಸಿದರು. ಉಭಯ ಕುಶಲೋಪರಿ ಮಾತನಾಡಿದರು. ಬಳಿಕ ಅವರೊಂದಿಗೆ ಫೋಟೋವನ್ನೂ ಕ್ಲಿಕ್ಕಿಸಿಕೊಂಡರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರ ನೇತೃತ್ವದಲ್ಲಿ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ.
ಟಿ20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದಾರೆ. ಪರೇಡ್ ಮತ್ತು ಅಭಿನಂದನಾ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ.
An excellent meeting with our Champions!
Hosted the World Cup winning team at 7, LKM and had a memorable conversation on their experiences through the tournament. pic.twitter.com/roqhyQRTnn
— Narendra Modi (@narendramodi) July 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.