ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಮಾತುಕತೆಗಳನ್ನು ನಡೆಸಿದರು. ಅಲ್ಲದೇ ಆಂಧ್ರಪ್ರದೇಶದ ಪುನರ್ನಿರ್ಮಾಣಕ್ಕಾಗಿ ಹಣಕಾಸಿನ ನೆರವು ಕೋರಿದರು.
ಅರ್ಧ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಿಎಂ ನಾಯ್ಡು ಅವರು ಪ್ರಧಾನಿ ಮೋದಿಯವರಿಗೆ ರಾಜ್ಯದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಅಗತ್ಯವಿರುವ ನೆರವಿನ ಬಗ್ಗೆ ವಿವರಿಸಿದರು. ರಾಜ್ಯ ರಾಜಧಾನಿ ಅಮರಾವತಿಯನ್ನು ನಿರ್ಮಿಸಲು ಮತ್ತು ಪೋಲಾವರಂ ಯೋಜನೆಯನ್ನು ಪೂರ್ಣಗೊಳಿಸಲು ಕೇಂದ್ರದ ಸಹಾಯವನ್ನು ಅವರು ಕೋರಿದರು.
2024-25ರ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಈ ತಿಂಗಳ ಕೊನೆಯಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ, ಈ ಹಿನ್ನೆಲೆಯಲ್ಲಿ ಸಿಎಂ ನಾಯ್ಡು ಅವರು ರಾಜ್ಯದ ಅವಶ್ಯಕತೆಗಳನ್ನು ಪ್ರಧಾನಿಯವರ ಗಮನಕ್ಕೆ ತಂದರು.
ಜೂನ್ 13 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಾಯ್ಡು ಅವರು ಪ್ರಧಾನಿಯವರೊಂದಿಗೆ ನಡೆಸಿದ ಮೊದಲ ಸಭೆ ಇದಾಗಿದೆ. ಪ್ರಧಾನ ಮಂತ್ರಿಯನ್ನು ಭೇಟಿ ಮಾಡುವ ಮೊದಲು, ಸಿಎಂ ನಾಯ್ಡು ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು.
ಸಿಎಂ ನಾಯ್ಡು ಅವರೊಂದಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮ್ ಮೋಹನ್ ನಾಯ್ಡು ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಇದ್ದರು.
ರಾಜ್ಯದ ಸಮೃದ್ಧಿ ಮತ್ತು ಬೆಳವಣಿಗೆಯ ಯುಗವನ್ನು ಪ್ರಾರಂಭಿಸಲು ಎನ್ಡಿಎ ಸರ್ಕಾರವು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಚರ್ಚಿಸಿದ್ದೇನೆ ಎಂದು ಪಿಯೂಷ್ ಗೋಯಲ್ ‘ಎಕ್ಸ್’ ನಲ್ಲಿ ಹೇಳಿದ್ದಾರೆ. ನಂತರ ನಾಯ್ಡು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಸಿಎಂ ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
Today, I had a constructive meeting with the Hon'ble Prime Minister, Shri @narendramodi Ji, in Delhi to address important matters concerning the welfare and development of Andhra Pradesh. I am confident that under his leadership, our State will re-emerge as a powerhouse among… pic.twitter.com/T8LJMK0DpC
— N Chandrababu Naidu (@ncbn) July 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.