ಲಕ್ನೋ: ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ತಮ್ಮ ನಿವಾಸದಲ್ಲಿ ಸಸಿ ನೆಟ್ಟರು.
ಈ ಮಹತ್ವದ ಅಭಿಯಾನವನ್ನು ಆರಂಭಿಸಿದ್ದಕ್ಕಾಗಿ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಅವರು, ಇದು ಜಾಗತಿಕ ತಾಪಮಾನವನ್ನು ಎದುರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ರಾಜ್ಯದ ನರ್ಸರಿಗಳಲ್ಲಿ ವಿವಿಧ ತಳಿಗಳ 54 ಕೋಟಿ ಸಸಿಗಳು ಲಭ್ಯವಿದೆ. ಹೀಗಾಗಿ ಜನರು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಯೋಗಿ ಮನವಿ ಮಾಡಿದರು.
”ಇಂದು ನನ್ನ ನಿವಾಸದಲ್ಲಿ ಸಸಿ ನೆಟ್ಟಿದ್ದೇನೆ. ಜುಲೈ 20 ರಂದು ಇಡೀ ರಾಜ್ಯದಲ್ಲಿ ಸಸಿಗಳನ್ನು ನೆಡುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.
“ಇಡೀ ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯೂ ಬೃಹತ್ ಮರ ನೆಡುವ ಅಭಿಯಾನದ ಭಾಗವಾಗಬೇಕು ಮತ್ತು ಅವರ ತಾಯಿಯ ಹೆಸರಿನಲ್ಲಿ ಮರವನ್ನು ನೆಡಬೇಕು. #Plant4Mother,” ಎಂದು ಅವರು X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 5 ರಂದು ದೆಹಲಿಯ ಬುದ್ಧ ಜಯಂತಿ ಪಾರ್ಕ್ನಲ್ಲಿ ಸಸಿ ನೆಡುವ ಮೂಲಕ ಪ್ರಧಾನಿ ಮೋದಿ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.