ಬೈಂದೂರು: ಭಾರೀ ಮಳೆಯಿಂದಾಗಿ ಬೈಂದೂರಿನ ದೊಂಬೆ ಟರ್ನ್ ಬಳಿಯ ಸೋಮೇಶ್ವರ ಗುಡ್ಡ ಕುಸಿತವಾಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡು ಸಾರ್ವಜನಿಕರಿಗೆ ಭಾರೀ ತೊಂದರೆಯಾಗಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಆಗಮಿಸಿ ಗುಡ್ಡ ಕುಸಿತ ಬಗ್ಗೆ ಪರಿಶೀಲಿಸಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಶಾಸಕರ ಭೇಟಿಯ ವೇಳೆ ತಹಶೀಲ್ದರ್, ಸಬ್ ಇನ್ಸ್ಪೆಕ್ಟರ್, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳು ಕೂಡ ಉಪಸ್ಥಿತರಿದ್ದು ಶಾಸಕರಿಗೆ ವಿವರಗಳನ್ನು ಒದಗಿಸಿದರು.
ಗುಡ್ಡ ಕುಸಿತದಿಂದ ಪಡುವರಿ-ಶಿರೂರನ್ನು ಸಂಪರ್ಕಿಸುವ ರಸ್ತೆ ಸ್ಥಗಿತವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರ ದಿನಗಳ ಒಳಗಡೆ ರಸ್ತೆ ಸಂಚಾರವನ್ನು ಪುನರಾರಂಭಿಸಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕರು ಹೇಳಿದ್ದಾರೆ.
ಅಧಿವೇಶನದ ನಿಮಿತ್ತ ಬೆಂಗಳೂರಿನಲ್ಲಿದ್ದ ಶಾಸಕ ಗಂಟಿಹೊಳೆ ಅವರು ವಾಪಾಸ್ಸಾಗುತ್ತಿದ್ದಂತೆ ನೇರವಾಗಿ ಸೋಮೇಶ್ವರ ಗುಡ್ಡ ಕುಸಿತದ ಬಳಿ ಆಗಮಿಸಿ ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲಿಸಿ ಸಾರ್ವಜನಿಕರ ಕಷ್ಟಗಳನ್ನು ಆಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.