ಬೆಂಗಳೂರು: ಮಳೆಗಾಳ ಆಗಮಿಸುತ್ತಿದ್ದಂತೆ ಅಲ್ಲಲ್ಲಿ ನಡೆಯುತ್ತಿರುವ ಭೂಕುಸಿತಗಳು ಜನರನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯ ವರದಿ ಮತ್ತಷ್ಟು ಭಯ ಮೂಡಿಸಿದೆ.
ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ನಲ್ಲಿ ಮಂಗಳವಾರ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸಿ.ಟಿ. ರವಿ, ಎನ್. ರವಿಕುಮಾರ್, ಛಲವಾದಿ ಟಿ. ನಾರಾಯಣಸ್ವಾಮಿ, ಪ್ರತಾಪ್ಸಿಂಹ ನಾಯಕ್, ಭಾರತಿ ಶೆಟ್ಟಿ, ಕೇಶವಪ್ರಸಾದ್, ಪಿ.ಎಚ್. ಪೂಜಾರ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 250 ಗ್ರಾಮ ಪಂಚಾಯಿತಿಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭೂಕುಸಿತವಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಭಾರತ ಸರ್ಕಾರದ ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ (ಎನ್ಐಆರ್ಎಂ) ಸಹಯೋಗದಲ್ಲಿ ನೀಡಿದ ಮಾರ್ಗಸೂಚಿಯಂತೆ ಭೂಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.