ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಈ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಗುರುರಾಜ್ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಜಿ.ಪರಮೇಶ್ವರ್ ಅವರು, ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 447 ಗೋವು ಕಳ್ಳತನ ಪ್ರಕರಣಗಳು ಹಾಗೂ 657 ಅಕ್ರಮ ಗೋವು ಸಾಗಾಟ ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ 2023-24ರಲ್ಲಿ 8 ಗೋವು ಕಳ್ಳತನ ಹಾಗೂ 12 ಅಕ್ರಮ ಸಾಗಾಟ ಪ್ರಕರಣ ದಾಖಲಾಗಿವೆ ಎಂದರು.
ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮವನ್ನು ಜರಗಿಸುತ್ತೇವೆ. ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು. ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಆರೋಪಿಗಳ ಪರೇಡ್ ನಡೆಸಲಾಗಿದ್ದು, ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.