ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರವು ಬೆಳವಣಿಗೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ವರ್ಷದ ಕಳೆದ ಆರು ತಿಂಗಳಲ್ಲಿ ಒಟ್ಟು 1.08 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಕೇಂದ್ರ ಹೇಳಿದೆ.
ಈ ಬಗ್ಗೆ ಇಂದು ಕೇಂದ್ರ ಗೃಹ ಸಚಿವಾಲಯ ರಾಜ್ಯಸಭೆಗೆ ಮಾಹಿತಿಯನ್ನು ನೀಡಿದ್ದು,”ಪ್ರವಾಸೋದ್ಯಮ ಕ್ಷೇತ್ರವು ಕಳೆದ ಮೂರು ವರ್ಷಗಳಲ್ಲಿ ವಾರ್ಷಿಕ ಸರಾಸರಿ 15.13 ಶೇಕಡಾ ಬೆಳವಣಿಗೆ ದರವನ್ನು ದಾಖಲಿಸಿದೆ ಎಂದಿದೆ.
ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರ ಪ್ರಕಾರ, 2024ರ ಜನವರಿಯಿಂದ ಜೂನ್ವರೆಗೆ ಒಟ್ಟು 1,08,41,009 ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಮತ್ತು 2023ರಲ್ಲಿ 2,11,24,674 ಪ್ರವಾಸಿಗರು ಭೇಟಿ ನೀಡಿದ್ದಾರೆ. 2022 ರಲ್ಲಿ 64,332 ಪ್ರವಾಸಿಗರು, 2021 ರಲ್ಲಿ 1,13,14,884 ಮತ್ತು 2020 ರಲ್ಲಿ 34,70,834 ಪ್ರವಾಸಿಗರು ಭೇಟಿ ನೀಡಿದ್ದಾರೆ.
2020 ರಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೋವಿಡ್ ಸಾಂಕ್ರಾಮಿಕ ರೋಗ ಹೊಡೆತ ನೀಡಿತ್ತು ಕಾರಣ ಎಂದಿದ್ದಾರೆ.
ಪ್ರವಾಸೋದ್ಯಮದ ಸುಧಾರಣೆಗಾಗಿ ಜಮ್ಮು-ಕಾಶ್ಮೀರದಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದ ಸಚಿವರು, ಹೆಚ್ಚುತ್ತಿರುವ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಮತ್ತು ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ಲಾಭದಿಂದ ಸ್ಥಳೀಯರಿಗೆ ಪ್ರಯೋಜನಗಳನ್ನು ನೀಡಲು ಸರ್ಕಾರವು ಹೋಂಸ್ಟೇ ಮಾರ್ಗಸೂಚಿಗಳನ್ನು ಸಹ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.