ನವದೆಹಲಿ: ಜಾಗತಿಕವಾಗಿ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಭಾರತವು ವಿಶ್ವದ ಹಾಲು ಪೂರೈಕೆಗೆ 25 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ಈ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ.
ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯು ಸುಮಾರು 6 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯ ದರದಲ್ಲಿ ಬೆಳೆಯುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇನ್ನೊಂದೆಡೆ ವಿಶ್ವ ಹಾಲು ಉತ್ಪಾದನೆಯು ವಾರ್ಷಿಕವಾಗಿ 2.1 ಪ್ರತಿಶತದಷ್ಟು ಬೆಳೆಯುತ್ತಿದೆ.
ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್, ದೇಶದಲ್ಲಿ ಹಾಲಿನ ಸಂಗ್ರಹಣೆ ಮತ್ತು ಮಾರಾಟದ ಬೆಲೆಯನ್ನು ಸಹಕಾರಿ ಮತ್ತು ಖಾಸಗಿ ಡೈರಿಗಳು ಅವುಗಳ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ಶಕ್ತಿಗಳ ಆಧಾರದ ಮೇಲೆ ನಿರ್ಧರಿಸುತ್ತವೆ ಎಂದಿದ್ದಾರೆ.
ಡೈರಿ ಉದ್ಯಮವು ಪ್ರಮುಖ ಸ್ಥಾನವನ್ನು ಹೊಂದಿರುವ ಭಾರತವು ಜಾಗತಿಕವಾಗಿ ಹಾಲು ಮತ್ತು ಡೈರಿ ಉತ್ಪನ್ನಗಳ ಪ್ರಮುಖ ಉತ್ಪಾದಕ ಎಂದು ಗುರುತಿಸಲ್ಪಟ್ಟಿದೆ. ಈ ವಲಯವು ತನ್ನ ಗಣನೀಯ ದೇಶೀಯ ಮಾರುಕಟ್ಟೆಯೊಂದಿಗೆ, ವಾಣಿಜ್ಯ ಯಶಸ್ಸಿಗೂ ಗಣನೀಯ ಅವಕಾಶಗಳನ್ನು ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.