ನವದೆಹಲಿ: ಭಾರತ ಭೇಟಿಯಲ್ಲಿರುವ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಮೋದಿ, ಯುಕೆ ಜೊತೆ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ. ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸುವ ಬಯಕೆಯನ್ನು ನಾವು ಹೊಂದಿದ್ದೇವೆ ಎಂದರು.
ಯುಕೆ ವಿದೇಶಾಂಗ ಕಾರ್ಯದರ್ಶಿಯಾಗಿ ಭಾರತಕ್ಕೆ ಮೊದಲ ಅಧಿಕೃತ ಭೇಟಿ ನೀಡಿರುವ ಲ್ಯಾಮಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರೊಂದಿಗೂ ದ್ವಿಪಕ್ಷೀಯ ಸಮಾಲೋಚನೆ ನಡೆಸಿದ್ದಾರೆ.
ಭಾರತ-ಯುಕೆ ವರ್ಚುವಲ್ ಶೃಂಗಸಭೆ 2021 ರ ಸಂದರ್ಭದಲ್ಲಿ ಉಭಯ ಪ್ರಧಾನ ಮಂತ್ರಿಗಳು ಒಪ್ಪಿಕೊಂಡಿರುವ ಮಾರ್ಗಸೂಚಿ 2030 ಅನ್ನು ಇಬ್ಬರೂ ಸಚಿವರು ಪರಿಶೀಲಿಸಿದರು. ಎರಡು ದೇಶಗಳ ನಡುವಿನ ಸಹಕಾರ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ವಲಸೆ ಮತ್ತು ಚಲನಶೀಲತೆ, ಐಟಿ/ಎಐ/ಟೆಕ್-ಕೇಂದ್ರಿತ ಪ್ರದೇಶಗಳು, ನಾವೀನ್ಯತೆ, ಹವಾಮಾನದ ಆದ್ಯತೆಯ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಉಭಯ ನಾಯಕ ನಡುವಣ ಚರ್ಚೆಯ ಕೇಂದ್ರಬಿಂದುವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.