ನವದೆಹಲಿ: ಭಾರತದಲ್ಲಿ ಒಟ್ಟು 15,300 ಮೆಗಾ ವ್ಯಾಟ್ ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಸರ್ಕಾರ ಹೇಳಿದೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ. ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22, 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ರಲ್ಲಿ ಸ್ಥಾಪಿತ ಅಣುಶಕ್ತಿ ಸಾಮರ್ಥ್ಯ 4780 ಮೆಗಾವ್ಯಾಟ್ ಆಗಿತ್ತು. ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34,228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47,971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.