ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ಭಯೋತ್ಪಾದಕರು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಎನ್ಕೌಂಟರ್ನಲ್ಲಿ ಒಬ್ಬ “ಪಾಕಿಸ್ತಾನಿ ವ್ಯಕ್ತಿ” ಕೂಡ ಸಾವನ್ನಪ್ಪಿದ್ದಾನೆ ಮತ್ತು ಇಬ್ಬರು ಸೈನಿಕರಿಗೆ ಗಾಯಗಳಾಗಿವೆ ಎಂದು ಸೇನೆ ಹೇಳಿದೆ.
ಫೆಬ್ರವರಿ 2021 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವನ್ನು ಉಲ್ಲಂಘಿಟಸಿ ಅನೇಕ ದಾಳಿಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಈ ದಾಳಿಯನ್ನು ನಡೆಸಿದೆ ಎಂದು ಮೂಲಗಳು ತಿಳಿಸಿವೆ.
“ಇದು ಆಕ್ರಮಣಕಾರಿ ಕ್ರಮ ಮತ್ತು ಸ್ಪಷ್ಟವಾಗಿ LOC ಉದ್ದಕ್ಕೂ ನಡೆದ ಕದನ ವಿರಾಮ ಉಲ್ಲಂಘಟನಯಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
X ನಲ್ಲಿನ ಹೇಳಿಕೆಯಲ್ಲಿ, ಸೇನೆಯು ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದೆ ಆದರೆ ಪಾಕಿಸ್ತಾನದ ಸೇನೆ ಅಥವಾ ಭಯೋತ್ಪಾದಕರನ್ನು ಹೆಸರಿಸಿಲ್ಲ.
“ನಿಯಂತ್ರಣ ರೇಖೆಯಲ್ಲಿರುವ ಮಚ್ಚಲ್ ಸೆಕ್ಟರ್ನ ಕಮ್ಕರಿಯಲ್ಲಿ ಫಾರ್ವರ್ಡ್ ಪೋಸ್ಟ್ನಲ್ಲಿ ಅಪರಿಚಿತ ವ್ಯಕ್ತಿಯೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಒಬ್ಬ ಪಾಕಿಸ್ತಾನಿ ವ್ಯಕ್ತಿಯನ್ನು ಕೊಲ್ಲಲಾಗಿದೆ ಮತ್ತು ನಮ್ಮ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಸೇನೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.