ಬೈಂದೂರು: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಮತ್ತು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಬೈಂದೂರಿನ ಒತ್ತಿನೆಣೆಯಲ್ಲಿ ʼಮೂಕಾಂಬಿಕಾ ವಿಮಾನ ನಿಲ್ದಾಣʼ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಭೇಟಿ ನೀಡುವುದರಿಂದ ವಿಮಾನನಿಲ್ದಾಣದ ಅವಶ್ಯಕತೆ ಈ ಭಾಗದಲ್ಲಿ ಸಾಕಷ್ಟಿದೆ ಎಂದು ಕೇಂದ್ರ ಸಚಿವರಿಗೆ ಈ ವೇಳೆ ಮನವರಿಕೆ ಮಾಡಿಕೊಡಲಾಗಿದೆ.
ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದೇವೆ ಎಂದು ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.
ಮನವಿಯ ಬಗ್ಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಲ್ಲಿ ಮನವಿ
ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಇಂದು ಬೈಂದೂರು ಶಾಸಕರಾದ… pic.twitter.com/b1amHwXhhE
— B Y Raghavendra (@BYRBJP) July 31, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.