ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇಸ್ರೇಲ್ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಹತ್ವದ ಸಲಹೆ ಸೂಚನೆಗಳನ್ನು ಬಿಡುಗಡೆ ಮಾಡಿದ್ದಾರೆ.
ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್ ಅನ್ನು ಪಾಲಿಸುವಂತೆ ಮತ್ತು ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಅಲ್ಲದೇ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭರವಸೆ ನೀಡುವ ಮೂಲಕ ಇಸ್ರೇಲ್ನಲ್ಲಿರುವ ಭಾರತೀಯರಿಗೆ ಸುರಕ್ಷತಾ ಆಶ್ರಯಗಳ ಹತ್ತಿರ ಇರುವಂತೆ ಸಲಹೆ ನೀಡಿದೆ.
“ದಯವಿಟ್ಟು ಎಚ್ಚರಿಕೆಯಿಂದ ಇರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಿ. ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ ”ಎಂದು ಗುರುವಾರ ಹೊರಡಿಸಿದ ಸಲಹೆಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮುನ್ನ ಗುರುವಾರ, ಲೆಬನಾನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ದೇಶವನ್ನು ತೊರೆಯುವಂತೆ ಒತ್ತಾಯಿಸಿದೆ. ಮುಂದಿನ ಸೂಚನೆ ಬರುವವರೆಗೂ ದೇಶಕ್ಕೆ ಪ್ರಯಾಣಿಸುವುದು ಬೇಡ ಎಂದಿದೆ. ಲೆಬನಾನ್ನಲ್ಲಿ ಉಳಿದುಕೊಂಡಿರುವ ಭಾರತೀಯ ಪ್ರಜೆಗಳಿಗೆ ತೀವ್ರ ಎಚ್ಚರಿಕೆಯನ್ನು ವಹಿಸಲು, ಅವರ ಚಲನವಲನಗಳನ್ನು ನಿರ್ಬಂಧಿಸಲು ಮತ್ತು ಬೈರುತ್ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಒತ್ತಾಯಿಸಿದೆ.
https://x.com/indemtel/status/1819361457386963443?ref_src=twsrc%5Etfw%7Ctwcamp%5Etweetembed%7Ctwterm%5E1819361457386963443%7Ctwgr%5E07a380465a5938f582b988464cc54ea25320cb70%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Findians-israel-advisory-indian-embassy-by-the-govt-amid-rising-middle-east-tension-lebanon-israel-and-hezbollah-101722661687650.html%3Futm_source%3Dmicrosoft-ht
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.