ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ರಾಷ್ಟ್ರ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಪ್ರಯಾಣ ಆರಂಭಿಸಿದ್ದಾರೆ. ಇಂದಿನಿಂದ ಆಗಸ್ಟ್ 7 ರವರೆಗೆ ಮೊದಲ ಹಂತದ ಭೇಟಿಯಲ್ಲಿ ಫಿಜಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಮುರ್ಮು ತನ್ನ ಪ್ರವಾಸದ ಎರಡನೇ ಹಂತದಲ್ಲಿ ಆಗಸ್ಟ್ 8 ಮತ್ತು 9 ರಂದು ನ್ಯೂಜಿಲೆಂಡ್ಗೆ ಭೇಟಿ ನೀಡಲಿದ್ದಾರೆ. ಅವರು ಗವರ್ನರ್ ಜನರಲ್ ಸಿಂಡಿ ಕಿರೊ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಮತ್ತು ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಅವರನ್ನು ಭೇಟಿಯಾಗಲಿದ್ದಾರೆ.
ಪ್ರವಾಸದ ಕೊನೆಯ ಹಂತದಲ್ಲಿ, ಮುರ್ಮು ಆಗಸ್ಟ್ 10 ರಂದು ಟಿಮೋರ್-ಲೆಸ್ಟೆಗೆ ಭೇಟಿ ನೀಡಲಿದ್ದಾರೆ ಮತ್ತು ಅಧ್ಯಕ್ಷ ಜೋಸ್ ರಾಮೋಸ್-ಹೊರ್ಟಾ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ. ಟಿಮೋರ್-ಲೆಸ್ಟೆ ಪ್ರಧಾನಿ ಕೇ ರಾಲಾ “ಕ್ಸಾನಾನಾ” ಗುಸ್ಮಾವೊ ಅವರೊಂದಿಗೂ ಸಭೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.