ನವದೆಹಲಿ: ವಯನಾಡು ಭೂಕುಸಿತದಿಂದ ಜರ್ಜರಿತಾಗಿರುವ ಕೇರಳಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಮಹತ್ವದ ಸಲಹೆಯನ್ನು ನೀಡಿದ್ದಾರೆ, ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಬೇಕು ಎಂದಿದ್ದಾರೆ. ಅಲ್ಲದೇ ಆಡಳಿತದ ರಕ್ಷಣೆಯಲ್ಲಿ ಅಕ್ರಮ ಜನವಸತಿಗಳು ಮತ್ತು ಅಕ್ರಮ ಗಣಿಗಾರಿಕೆಗಳು ಪರಿಸರ ಸೂಕ್ಷ್ಮ ವಲಯಗಳಲ್ಲಿ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
‘‘ಸ್ಥಳೀಯ ರಾಜಕಾರಣಿಗಳಿಂದ ಅಕ್ರಮ ಜನವಸತಿಗೆ ರಕ್ಷಣೆ ದೊರೆಯುತ್ತಿದೆ, ಪ್ರವಾಸೋದ್ಯಮ ಹೆಸರಲ್ಲಿಯೂ ಸರಿಯಾದ ವಲಯಗಳನ್ನು ಮಾಡುತ್ತಿಲ್ಲ, ಅತಿ ಸೂಕ್ಷ್ಮ ಪ್ರದೇಶದಲ್ಲೂ ಅತಿಕ್ರಮಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಈಗಾಗಲೇ ಸಮಿತಿ ರಚಿಸಿದ್ದೇವೆ. ಅರಣ್ಯ ಇಲಾಖೆಯ ಮಾಜಿ ಮಹಾನಿರ್ದೇಶಕ ಸಂಜಯ್ ಕುಮಾರ್ ಅವರು ಕೇರಳ ಸರ್ಕಾರದೊಂದಿಗೆ ಪತ್ರವ್ಯವಹಾರ ನಡೆಸಿದ್ದು, ಸ್ಥಳೀಯ ಸರ್ಕಾರದ ರಕ್ಷಣೆಯಲ್ಲಿ ಕಾನೂನುಬಾಹಿರವಾಗಿ ಮಾನವ ವಾಸ ಮತ್ತು ಅಕ್ರಮ ಗಣಿಗಾರಿಕೆ ನಡೆದಿದೆ” ಎಂದು ಯಾದವ್ ಹೇಳಿದ್ದಾರೆ.
ಪರಿಸರ ಸೂಕ್ಷ್ಮ ವಲಯಕ್ಕೆ ಕೇರಳ ಸರಕಾರ ಯೋಜನೆ ರೂಪಿಸಬೇಕು. ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ವಾಸ ಮತ್ತು ಗಣಿಗಾರಿಕೆ ನಡೆಸಬಾರದು.ಅಕ್ರಮ ವಾಸ ಮತ್ತು ಗಣಿಗಾರಿಕೆಯಿಂದ ನಷ್ಟ ಅನುಭವಿಸಿದ್ದೇವೆ, ಪರಿಸರ ಸೂಕ್ಷ್ಮ ವಲಯಕ್ಕೆ ಸಮಿತಿ ಮಾಡಿದ್ದೇವೆ, ಬಹಳ ದಿನಗಳಿಂದ ರಾಜ್ಯ ಸರಕಾರ ಸಮಿತಿ ಮಾಡಬಾರದೆಂದು ಗೈರಾಗುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.