ನವದೆಹಲಿ: ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ ಇಲ್ಲಿಯವರೆಗೆ 1 ಕೋಟಿ 48 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ.
ದೇಶಾದ್ಯಂತ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2015 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಯಿತು.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ರಾಜ್ಯ ಸಚಿವ ಜಯಂತ್ ಚೌಧರಿ, ಈ ತರಬೇತಿಯು ಉದ್ಯೋಗ ಪಡೆಯಲು ಸಹಾಯ ಮಾಡಿದೆ. ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0 ರ ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ವೇರ್, ಉಡುಪು, ಕೃಷಿ ಮತ್ತು ಲಾಜಿಸ್ಟಿಕ್ ಯುವಜನರಲ್ಲಿ ಹೆಚ್ಚು ಆದ್ಯತೆಯ ವಲಯಗಳಾಗಿವೆ ಎಂದಿದ್ದಾರೆ.
ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯು (ಪಿ.ಎಂ.ಕೆ.ವಿ.ವೈ.) ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ಕೌಶಲ್ಯ ಪ್ರಮಾಣೀಕರಿಸುವ ಯೋಜನೆಯ ಉದ್ದೇಶವು ಭಾರತದ ಯುವಜನತೆಗೆ, ಉದ್ಯೋಗಕ್ಕೆ ಸೂಕ್ತವಾದ ಕೌಶಲ್ಯ ತರಬೇತಿ ನೀಡಿ, ಅವರು ಉತ್ತಮ ಜೀವನೋಪಾಯ ಗಳಿಸುವಲ್ಲಿ ಬೆಂಬಲಿಸುವುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.