ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಸಂಸತ್ತಿನ ಏಳು ಸದಸ್ಯರಿಗೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಮಾವಿನಹಣ್ಣಿನ ಬುಟ್ಟಿಗಳನ್ನು ಕಳುಹಿಸಿಕೊಟ್ಟಿದ್ದು, ಇದು ಪಾಕಿಸ್ಥಾನಕ್ಕೆ ಈ ನಾಯಕರ ಮೇಲಿರುವ ಪ್ರೀತಿಯನ್ನು ಪ್ರತಿಬಿಂಬಿಸುತದೆ ಎಂದರೆ ತಪ್ಪಾಗಲಾರದು.
ಈ ಬಗ್ಗೆ ರಾಹುಲ್ ಗಾಂಧಿ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ರಾಯ್ ಬರೇಲಿಯ ಕಾಂಗ್ರೆಸ್ ಸಂಸದರು ಪಾಕಿಸ್ತಾನದೊಂದಿಗೆ ಅಪವಿತ್ರ ಸಂಬಂಧ ಹೊಂದಿದ್ದಾರೆ ಎಂದಿದೆ.
ಗಾಂಧಿ ಅವರಲ್ಲದೆ, ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್, ಸಮಾಜವಾದಿ ಪಕ್ಷದ ರಾಂಪುರದ ಸಂಸದರಾದ ಮೊಹಿಬ್ಬುಲ್ಲಾ ನದ್ವಿ, ಸಂಭಾಲ್ ಸಂಸದ ಜಿಯಾ ಉರ್ ರೆಹಮಾನ್ ಬಾರ್ಗ್ ಮತ್ತು ಕೈರಾನಾ ಸಂಸದ ಇಕ್ರಾ ಹಸನ್ ಮತ್ತು ಗಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಅವರಿಗೆ ಪಾಕಿಸ್ಥಾನ ಹೈಕಮಿಷನ್ ಮಾವಿನ ಹಣ್ಣಿನ ಬುಟ್ಟಿಗಳನ್ನು ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಬೆಳವಣಿಗೆಯ ಬಗ್ಗೆ ಬುಧವಾರ ಬಿಜೆಪಿಯು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ.
“ಕೆಲವು ಸಮಯದ ಹಿಂದೆ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಮಾವಿನ ಹಣ್ಣುಗಳನ್ನು ಇಷ್ಟಪಡುವುದಿಲ್ಲ ಎಂದು ಹೇಳಿದ್ದರು. ಇದೀಗ ರಾಹುಲ್ ಗಾಂಧಿಗೆ ಪಾಕಿಸ್ತಾನ ರಾಯಭಾರ ಕಚೇರಿ ಮಾವಿನ ಹಣ್ಣುಗಳನ್ನು ಕಳುಹಿಸಿದೆ. ಅವರು ಇಷ್ಟಪಡುವ ಇತರ ವಿಷಯಗಳ ಬಗ್ಗೆಯೂ ಅವರು ಹೇಳಬೇಕು” ಎಂದು ಬಿಜೆಪಿಯ ಗಿರಿರಾಜ್ ಸಿಂಗ್ ಟೀಕಿಸಿದ್ದಾರೆ.
https://x.com/ANI/status/1821178753051193678?ref_src=twsrc%5Etfw%7Ctwcamp%5Etweetembed%7Ctwterm%5E1821178753051193678%7Ctwgr%5Ecc82cd0f34b81e33e3061f5e066894a6da12d94d%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Fpakistan-embassy-mangoes-bjp-rahul-gandhi-opposition-101723083810213.html
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.