ನವದೆಹಲಿ: ಅಶಾಂತಿಯ ಕೂಪವಾಗಿ ಮಾರ್ಪಟ್ಟಿರುವ ಬಾಂಗ್ಲಾದೇಶದಲ್ಲಿ ಕೊನೆಗೂ ಹಂಗಾಮಿ ಸರ್ಕಾರ ರಚನೆಯಾಗಿದೆ. ಇದರ ಮುಖ್ಯಸ್ಥರಾಗಿ ಗುರುವಾರ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಯಂತೆ ಯೂನಸ್ ಅವರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ.
ಈ ನಡುವೆ ಪ್ರಮಾಣವಚನ ಸ್ವೀಕರಿಸಿದ ಯೂನಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. “ಬಾಂಗ್ಲಾದೇಶದಲ್ಲಿ ತ್ವರಿತವಾಗಿ ಸಹಜ ಸ್ಥಿತಿಗೆ ಮರಳುವ ಭರವಸೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ ಮತ್ತು ದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ರಕ್ಷಣೆಗೆ ಕರೆ ನೀಡಿದ್ದಾರೆ.
“ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರ ಹೊಸ ಜವಾಬ್ದಾರಿಗಳಿಗೆ ನನ್ನ ಶುಭಾಶಯಗಳು. ಹಿಂದೂಗಳು ಮತ್ತು ಇತರ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುವ ಮೂಲಕ ಸಹಜ ಸ್ಥಿತಿಗೆ ಬೇಗ ಮರಳಲು ನಾವು ಆಶಿಸುತ್ತೇವೆ. ನಮ್ಮ ಎರಡೂ ಜನರ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗಾಗಿ ಹಂಚಿಕೊಂಡ ಆಕಾಂಕ್ಷೆಗಳನ್ನು ಪೂರೈಸಲು ಬಾಂಗ್ಲಾದೇಶದೊಂದಿಗೆ ಕೆಲಸ ಮಾಡಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವ್ಯಾಪಕ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೋದಿ ಮಾಡಿರುವ ಟ್ವೀಟ್ ಮಹತ್ವ ಪಡೆದುಕೊಂಡಿದೆ.
My best wishes to Professor Muhammad Yunus on the assumption of his new responsibilities. We hope for an early return to normalcy, ensuring the safety and protection of Hindus and all other minority communities. India remains committed to working with Bangladesh to fulfill the…
— Narendra Modi (@narendramodi) August 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.