ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬ್ರಿಟನ್ನಲ್ಲಿ ಆಶ್ರಯ ಪಡೆಯಲಿದ್ದಾರೆ ಎಂಬ ವರದಿಗಳ ನಡುವೆ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾಹಿತಿ ನೀಡಿ, ದೂರವಾಣಿ ಮೂಲಕ ಇಬ್ಬರೂ ಮುಖಂಡರು ಬಾಂಗ್ಲಾದೇಶ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯನ್ನ ಬಗ್ಗೆ ಚರ್ಚಿಸಿದರು ಎಂದಿದ್ದಾರೆ.
ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾ ರೂಪ ತಾಳಿದ ತರುವಾಯ ಶೇಖ್ ಹಸೀನಾ ಆಗಸ್ಟ್ 5 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದಾರೆ.
ಶೇಖ್ ಹಸೀನಾ ದೆಹಲಿಯಲ್ಲಿಯೇ ಇರುತ್ತಾರೆಯೇ ಅಥವಾ ನಂತರ ಬೇರೆ ಸ್ಥಳಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಬುಧವಾರ, ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಝೆದ್ ಜಾಯ್ ಅವರು ಯುನೈಟೆಡ್ ಸ್ಟೇಟ್ಸ್ ಅಥವಾ ಯುನೈಟೆಡ್ ಕಿಂಗ್ಡಮ್ಗೆ ತೆರಳಬೇಕೇ ಎಂಬುದರ ಕುರಿತು ತಾಯಿ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶೇಖ್ ಹಸೀನಾ ಅವರು ದೆಹಲಿಯಲ್ಲಿ ಸ್ವಲ್ಪ ಕಾಲ ಇರಲಿದ್ದಾರೆ ಎಂದಿದ್ದಾರೆ.
Received a call from UK Foreign Secretary @DavidLammy today.
Discussed the situation in Bangladesh and West Asia.
— Dr. S. Jaishankar (@DrSJaishankar) August 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.