ನವದೆಹಲಿ: ಬಾಂಗ್ಲಾದಲ್ಲಿ ಅಶಾಂತಿ ತಲೆದೋರಿದ ತರುವಾಯ ಇತ್ತೀಚಿನ ವಾರಗಳಲ್ಲಿ 7,200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
9,000 ವಿದ್ಯಾರ್ಥಿಗಳು ಸೇರಿದಂತೆ ಅಂದಾಜು 19,000 ಭಾರತೀಯ ನಾಗರಿಕರು ಬಾಂಗ್ಲಾದೇಶದಲ್ಲಿ ನೆಲೆಸಿದ್ದಾರೆ. ಯಾವುದೇ ಔಪಚಾರಿಕ ಸ್ಥಳಾಂತರಿಸುವ ಉಪಕ್ರಮ ಕೈಗೊಳ್ಳದಿದ್ದರೂ ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡಲಾಗಿದೆ ಎಂದಿದ್ದಾರೆ.
ಢಾಕಾ, ಚಿತ್ತಗಾಂಗ್, ರಾಜ್ಶಾಹಿ, ಸಿಲ್ಹೆಟ್ ಮತ್ತು ಖುಲ್ನಾದಲ್ಲಿರುವ ಭಾರತೀಯ ಹೈಕಮಿಷನ್ಗಳು ನಾಗರಿಕರಿಗೆ ಸ್ವಯಂಪ್ರೇರಿತವಾಗಿ ಹಿಂದಿರುಗಲು ಸಕ್ರಿಯವಾಗಿ ಸಹಾಯ ಮಾಡುತ್ತಿವೆ. ಹಿಂದಿರುಗುವ ನಾಗರಿಕರ ಸುರಕ್ಷಿತ ಮಾರ್ಗಕ್ಕಾಗಿ ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಸಮನ್ವಯವನ್ನೂ ಸಾಧಿಸಾಗುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭೂ, ಬಂದರು ಮತ್ತು ವಿಮಾನ ನಿಲ್ದಾಣಗಳಲ್ಲಿ ಸುಗಮ ಸಾರಿಗೆಯನ್ನು ಖಾತ್ರಿಗೊಳಿಸುತ್ತಿದೆ ಎಂದಿದ್ದಾರೆ.
ಇದಲ್ಲದೆ, ರಾಜ್ಯಸಭೆಗೆ ಮತ್ತಿಷ್ಟು ಮಾಹಿತಿ ನೀಡಿದ ಅವರು, ಮೂರು ವರ್ಷಗಳಲ್ಲಿ ಕೆನಡಾದ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು. ಅಲ್ಲದೇ ‘ನೆರೆಹೊರೆಯ ಮೊದಲ ನೀತಿ’ಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಗಾಜಾಕ್ಕೆ ಕಳುಹಿಸಲಾದ ಮಾನವೀಯ ನೆರವಿ ಬಗ್ಗೆ ವಿವರ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.