ಢಾಕಾ: ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ದಾಳಿಯ ನುಡುವೆಯೇ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಪ್ರೊ ಮುಹಮ್ಮದ್ ಯೂನಸ್ ಇಂದು ಢಾಕಾದ ಢಾಕೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, “ನಾವು ಮಾನವ ಹಕ್ಕುಗಳು ಮತ್ತು ವಾಕ್ ಸ್ವಾತಂತ್ರ್ಯವನ್ನು ಸ್ಥಾಪಿಸಬೇಕು. ಅದು ನಮ್ಮ ಪ್ರಧಾನ ಗುರಿಯಾಗಿದೆ” ಎಂದಿದ್ದಾರೆ
ಢಾಕಾ ಟ್ರಿಬ್ಯೂನ್ನ ವರದಿಯ ಪ್ರಕಾರ, ಎಲ್ಲರಿಗೂ ಮಾನವ ಹಕ್ಕುಗಳು ಮತ್ತು ವಾಕ್ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಮಧ್ಯಂತರ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಯೂನಸ್ ಹೇಳಿದ್ದಾರೆ.
“ನೀವು ಮನುಷ್ಯರು, ಬಾಂಗ್ಲಾದೇಶದ ಪ್ರಜೆ ಎಂದು ನೀವು ಸರಳವಾಗಿ ಹೇಳಬಹುದು ಮತ್ತು ಇದು ನಿಮ್ಮ ಸಾಂವಿಧಾನಿಕ ಹಕ್ಕು, ಇದನ್ನು ಖಚಿತಪಡಿಸಿಕೊಳ್ಳಬೇಕು. ಅದು ನಮ್ಮ ಆದ್ಯತೆ ” ಎಂದು ಅವರು ಹೇಳಿದರು.
“ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು, ಭಿನ್ನಾಭಿಪ್ರಾಯ ಸೃಷ್ಟಿಸಲು ಅವಕಾಶವಿಲ್ಲ. ನಾವೆಲ್ಲರೂ ಸಮಾನರು ಎಂದು ಹೇಳಲು ನಾನು ಇಲ್ಲಿದ್ದೇನೆ, ಇಲ್ಲಿ ಯಾವುದೇ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಯಾವುದೇ ಅವಕಾಶವಿಲ್ಲ” ಎಂದು ಅವರು ಹೇಳಿದರು.
“ದಯವಿಟ್ಟು ಶಾಂತಿ ಸ್ಥಾಪಿಸಲು ನಮಗೆ ಸಹಾಯ ಮಾಡಿ, ತಾಳ್ಮೆಯಿಂದಿರಿ ಮತ್ತು ನಾವು ಆಡಳಿತ ಮಾಡಬಹುದೇ ಅಥವಾ ಇಲ್ಲವೇ ಎಂಬುದನ್ನು ನಂತರ ನಿರ್ಣಯಿಸಿ. ಹಾಗೆ ಮಾಡಲು ಸಾಧ್ಯವಾಗದಿದ್ದರೆ ನಮ್ಮನ್ನು ದೂಷಿಸಿ” ಎಂದು ಅವರು ಹಿಂದೂ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ಇದಕ್ಕೂ ಮೊದಲು, ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಯೂನಸ್ ಖಂಡಿಸಿದ್ದರು, ಅದನ್ನು ಹೇಯ ಎಂದು ಕರೆದಿದ್ದರು.
ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಪಾರ ಸಂಖ್ಯೆಯ ಹಿಂದೂಗಳು ಬೀದಿಗಿಳಿದು ಪ್ರತಿಭಟಿಸಿದ ನಂತರ ಯೂನಸ್ ಅವರು ಹಿಂದೂ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.