ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಾರದು ಮತ್ತು ಶಾಸಕರು ಅಧಿಕಾರಿಗಳ ಸಭೆ ನಡೆಸಬಾರದು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ವಿನಾಕಾರಣ ಹಲವು ರೀತಿಯಲ್ಲಿ ಸಮಸ್ಯೆ ನೀಡುತ್ತಿದ್ದಾರೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಯಾರೇ ಅಡ್ಡಿ ಬಂದರೂ ಅದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಶಾಸಕರಾದ ಗುರುರಾಜ್ ಗಂಟೆಹೊಳೆಯವರು ತಿಳಿಸಿದರು.
ಬುಧವಾರ ನಡೆದ ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ವರ್ತನೆಯನ್ನು ಖಂಡಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಕೆಡಿಪಿ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಮತ್ತು ಆಗಬೇಕಿರುವ ಕಾರ್ಯಗಳ ಮಾಹಿತಿ ವರದಿ ಇತ್ಯಾದಿಗಳನ್ನು ಪಡೆಯಲಾಗುತ್ತದೆ. ಶಾಸಕರೇ ಇದರ ಅಧ್ಯಕ್ಷರಾಗಿರುವುದರಿಂದ ಶಾಸಕರ ನೇತೃತ್ವದಲ್ಲಿ ಸಭೆ ನಡೆಯುತ್ತದೆ. ಅಭಿವೃದ್ಧಿಯ ವಿಷಯದಲ್ಲಿ ಕೈಜೋಡಿಸುವಂತೆ ಕಾಂಗ್ರೆಸ್ ಸದಸ್ಯರಲ್ಲೂ ಮನವಿ ಮಾಡಿದ ಮೇಲೂ ಕಾಂಗ್ರೆಸ್ ಸದಸ್ಯರು ಏಕಾಏಕಿ ನಮಗೆ ಮಾಹಿತಿ ನೀಡದೆ ಸಭೆ ನಡೆಸಲಾಗುತ್ತದೆ ಎಂಬುದಾಗಿ ಶಾಸಕರನ್ನೇ ಪ್ರಶ್ನಿಸುವುದು ಎಷ್ಟು ಸರಿ? ಎಂದಿದ್ದಾರೆ
ಒಟ್ಟಿನಲ್ಲಿ ಕಾಂಗ್ರೆಸಿಗರಿಗೆ ಬೈಂದೂರು ಕ್ಷೇತ್ರದ ಅಭಿವೃದ್ಧಿ ಬೇಕಾಗಿಲ್ಲ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ನಾನು ನಡೆಸುತ್ತಿರುವ ಪ್ರಯತ್ನಗಳನ್ನು ಅವರು ವಿಫಲಗೊಳಿಸುವ ಯತ್ನ ನಡೆಸುತ್ತಿದ್ದಾರೆ. ಅವರ ಸರಕಾರ ಇರಬಹುದು, ಆದರೆ ಜನರು ಮತ ಹಾಕಿಸಿ ಜನಸೇವೆಗೆ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ಇಂತಹ ಕೆಟ್ಟ ರಾಜಕಾರಣ ಮಾಡುವುದು ಸರಿಯಲ್ಲ. ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ಎಲ್ಲರೂ ಒಂದಾಗಿ ಮುನ್ನಡೆಯಬೇಕು ಎಂದು ಗಂಟಿಹೊಳೆ ಹೇಳಿದ್ದಾರೆ.
ರಾಜಕೀಯವೇ ಬೇರೆ ಅಭಿವೃದ್ಧಿಯ ಬೇರೆ. ರಾಜಕೀಯ ಮಾಡಲು ಹಲವು ವೇದಿಕೆಗಳಿವೆ. ಪಕ್ಷದ ಸೂಚನೆಯಂತೆ ಆ ವೇದಿಕೆಗಳಲ್ಲಿ ಏನೇ ಬೇಕಾದರೂ ಮಾಡಿಕೊಳ್ಳಲಿ ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದು, ಅಧಿಕಾರಿಗಳ ಸಭೆಯನ್ನೇ ನಡೆಸಬಾರದು ಎಂದು ಹಠಕ್ಕೆ ಬಿದ್ದು ಅದನ್ನು ತಡೆಯುವ ಎಲ್ಲಾ ಪ್ರಯತ್ನ ಮಾಡುವುದು ಇತ್ಯಾದಿ ಕಾಂಗ್ರೆಸ್ ಗೆ ಶೋಭೆ ತರುವಂತದ್ದಲ್ಲ ಎಂದು ಕಿಡಿ ಕಾರಿದರು.
ಶಾಸಕರಿಗೆ ಯಾವುದೇ ಕಾರಣಕ್ಕೂ ಕೆಲಸ ಮಾಡಲು ಬಿಡಬಾರದು ಎನ್ನುವ ಹಠಕ್ಕೆ ಬೈಂದೂರು ಕಾಂಗ್ರೆಸ್ ಬಿದ್ದಂತಿದೆ. ಶಾಸಕರ ಹಕ್ಕನ್ನು ಮಟಕ ಗೊಳಿಸುತ್ತಿರುವ ಬಗ್ಗೆ ಖುದ್ದು ಜಿಲ್ಲಾಧಿಕಾರಿಯವರ ಗಮನಕ್ಕೂ ತಂದಿದ್ದೇನೆ. ಅಲ್ಲದೆ ಈ ರೀತಿ ಹಕ್ಕು ಮಟಕುಗೊಳಿಸುವುದಿದ್ದರೆ ಅಥವಾ ಕಾನೂನು ಪ್ರಕಾರ ಶಾಸಕರಿಂದ ಏನಾದರೂ ತಪ್ಪಾಗಿದ್ದರೆ ಅದನ್ನು ಲಿಖಿತ ರೂಪದಲ್ಲಿ ನೀಡಿ ಎಂದೂ ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದೇನೆ. ಅಭಿವೃದ್ಧಿ ವಿಷಯವಾಗಿ ಚರ್ಚೆ ಮಾಡಬಾರದೆ? ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಯ ಯಾವುದಾದರೂ ವಿಷಯವನ್ನು ಪದೇ ಪದೇ ಫಾಲೋ ಮಾಡಬಾರದೆ? ಅಥವಾ ಅಧಿಕಾರಿಗಳ ಸಭೆ ಮಾಡಬಾರದು ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂಬುದನ್ನು ಈಗಾಗಲೇ ಜಿಲ್ಲಾಧಿಕಾರಿಯವರಿಗೆ ತಿಳಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಲಿಖಿತ ರೂಪದಲ್ಲಿ ಉತ್ತರ ಬರುವುದಕ್ಕೆ ಕಾಯುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ನಾವು ನಡೆಸುವ ಕಾರ್ಯವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.