ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು ಮತ್ತು ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ..
ಪ್ರಧಾನಿ ನರೇಂದ್ರ ಮೋದಿ ಅವರು X ನಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, “ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ. ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇಎ. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯ ಭರವಸೆಯನ್ನು ಅವರು ನೀಡಿದರು” ಎಂದಿದ್ದಾರೆ.
ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಹಿಂದೂ ಸಮುದಾಯದ ಸದಸ್ಯರ ಮೇಲೆ ದಾಳಿಗಳು ವರದಿಯಾಗುತ್ತಿರುವ ಬಗ್ಗೆ ಮೋದಿ ಕಳವಳವನ್ನು ವ್ಯಕ್ತಪಡಿಸಿದ ನಂತರ ಯೂನಸ್ ಅವರಿಂದ ದೂರವಾಣಿ ಕರೆ ಬಂದಿದೆ.
ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ “ಹೊಸ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ” ಯೂನಸ್ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ , ಬಾಂಗ್ಲಾದೇಶದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುವಂತೆ ಕೇಳಿದ್ದರು.
Received a telephone call from Professor Muhammad Yunus, @ChiefAdviserGoB. Exchanged views on the prevailing situation. Reiterated India's support for a democratic, stable, peaceful and progressive Bangladesh. He assured protection, safety and security of Hindus and all…
— Narendra Modi (@narendramodi) August 16, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.