ನವದೆಹಲಿ: ಕಳೆದ 2023-24 ರ ಆರ್ಥಿಕ ವರ್ಷದಲ್ಲಿ ಭಾರತದ ಬೆಳವಣಿಗೆಯು ನಿರೀಕ್ಷೆಗಿಂತ ಉತ್ತಮವಾಗಿದೆ ಮತ್ತು 2027 ರ ವೇಳೆಗೆ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ ಗೀತಾ ಗೋಪಿನಾಥ್ ಹೇಳಿದ್ದಾರೆ.
ನವದೆಹಲಿಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗೋಪಿನಾಥ್ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಮಾತನಾಡಿದ್ದು, ಮುಂದಿನ 5-6 ವರ್ಷಗಳಲ್ಲಿ ದೇಶವು ಲಕ್ಷಾಂತರ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸುವ ಅಗತ್ಯವಿದೆ ಎಂದಿದ್ದಾರೆ.
ಖಾಸಗಿ ಬಳಕೆ ಚೇತರಿಸಿಕೊಳ್ಳುವಂತೆ ಮತ್ತು ಮಾನ್ಸೂನ್ ಫಸಲುಗಳು ಹೆಚ್ಚಾಗುವುದನ್ನು IMF ನಿರೀಕ್ಷಿಸುತ್ತದೆ ಎಂದು ಅವರು ಹೇಳಿದ್ದಾರೆ.
ದ್ವಿಚಕ್ರ ವಾಹನಗಳ ಮಾರಾಟದಿಂದ ಹಿಡಿದು ಗ್ರಾಹಕ ಸರಕುಗಳವರೆಗೆ, ಒಟ್ಟಾರೆ ಬಳಕೆಯು ಭಾರತದಲ್ಲಿ ಹೆಚ್ಚಾಗುತ್ತಿದೆ ಎಂದು ಗೋಪಿನಾಥ್ ಹೇಳಿದ್ದಾರೆ.
ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಕಳೆದ ತಿಂಗಳಲ್ಲಿ ಪ್ರಯಾಣಿಕ ವಾಹನಗಳು, ತ್ರಿಚಕ್ರ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಕ್ವಾಡ್ರಿಸೈಕಲ್ಗಳ ಒಟ್ಟು ಉತ್ಪಾದನೆಯು 24 ಲಕ್ಷ 37 ಸಾವಿರ ಯುನಿಟ್ಗಳನ್ನು ಮೀರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.