ನವದೆಹಲಿ: ರಕ್ಷಾಬಂಧನದ ಪಾವನ ಪರ್ವವನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮಕ್ಕಳೊಂದಿಗೆ ಆಚರಿಸಿದ್ದಾರೆ. ಹಲವಾರು ಶಾಲಾ ಮಕ್ಕಳು ಪ್ರಧಾನಿ ನಿವಾಸಕ್ಕೆ ಆಗಮಿಸಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ.
“ಸಹೋದರ ಸಹೋದರಿಯರ ನಡುವಿನ ಅಪಾರ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯವನ್ನು ತರಲಿ ಮತ್ತು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ” ಎಂದು ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಮತ್ತೊಂದು ಎಕ್ಸ್ ಪೋಸ್ಟ್ನಲ್ಲಿ ಮಕ್ಕಳೊಂದಿಗಿನ ಹಲವು ಫೋಟೋಗಳನ್ನು ಹಂಚಿಕೊಂಡು, “ನನ್ನ ಯುವ ಸ್ನೇಹಿತರೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ್ದಕ್ಕೆ ಸಂತೋಷವಾಗುತ್ತಿದೆ” ಎಂದು ಒಕ್ಕಣೆ ಬರೆದಿದ್ದಾರೆ.
समस्त देशवासियों को भाई-बहन के असीम स्नेह के प्रतीक पर्व रक्षाबंधन की ढेरों शुभकामनाएं। यह पावन पर्व आप सभी के रिश्तों में नई मिठास और जीवन में सुख, समृद्धि एवं सौभाग्य लेकर आए।
— Narendra Modi (@narendramodi) August 19, 2024
Here are glimpses from a special Raksha Bandhan celebration at 7, LKM. pic.twitter.com/7btANoBKWo
— Narendra Modi (@narendramodi) August 19, 2024
Happy to have marked Raksha Bandhan with my young friends. pic.twitter.com/yWs32Sfon5
— Narendra Modi (@narendramodi) August 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.