ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಕ್ವಾಡ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಸಹಕಾರವನ್ನು ಪರಿಶೀಲಿಸಿದರು.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ನನ್ನ ಸ್ನೇಹಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತನಾಡಲು ಸಂತೋಷವಾಯಿತು. ನಾವು ನಮ್ಮ ದ್ವಿಪಕ್ಷೀಯ ಸಂಬಂಧಗಳ ಪ್ರಗತಿ ಮತ್ತು ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರದ ಬಗ್ಗೆ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.
ನವೆಂಬರ್ 2017 ರಲ್ಲಿ, ಭಾರತ, ಜಪಾನ್, ಯುಎಸ್ ಮತ್ತು ಆಸ್ಟ್ರೇಲಿಯಾಗಳು ಇಂಡೋ-ಪೆಸಿಫಿಕ್ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಯಾವುದೇ ಪ್ರಭಾವದಿಂದ ಮುಕ್ತವಾಗಿಡಲು ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ಕ್ವಾಡ್ ಅನ್ನು ಸ್ಥಾಪಿಸುವ ದೀರ್ಘಾವಧಿಯ ಪ್ರಸ್ತಾಪಕ್ಕೆ ರೂಪು ನೀಡಿದವು.
Delighted to speak to my friend @AlboMP. We took stock of progress in our bilateral relations and cooperation in the multilateral fora, including the Quad.
— Narendra Modi (@narendramodi) August 26, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.