ಮುಂಬಯಿ: ಮಹಾರಾಷ್ಟ್ರದ ರಾಜ್ಕೋಟ್ ಕೋಟೆಯಲ್ಲಿ ಸ್ಥಾಪಿಸಲಾದ ಛತ್ರಪತಿ ಶಿವಾಜಿ ಪ್ರತಿಮೆಯ ಕುಸಿತವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ. ಇಂದು ಮಹಾರಾಷ್ಟ್ರ ಭೇಟಿಯಲ್ಲಿರುವ ಅವರು, ಪ್ರತಿಮೆ ಕುಸಿತದಿಂದ ನೋವು ಅನುಭವಿಸುತ್ತಿರುವವರ ಬಳಿಯೂ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
“ನಾನು ಇಲ್ಲಿಗೆ ಬಂದಿಳಿದ ಕ್ಷಣದಲ್ಲಿ, ಪ್ರತಿಮೆ ಕುಸಿತಕ್ಕಾಗೊ ನಾನು ಮೊದಲು ಶಿವಾಜಿಯ ಬಳಿ ಕ್ಷಮೆಯಾಚಿಸಿದೆ. ಕುಸಿತದಿಂದ ನೋಯುತ್ತಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಪ್ರಧಾನಿ ಮೋದಿ ಹೇಳಿದರು.
“ಛತ್ರಪತಿ ಶಿವಾಜಿ ಮಹಾರಾಜರನ್ನು ನಾವು ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ತೀವ್ರವಾಗಿ ನೋವುಂಡವರಿಗೆ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಮಗೆ ನಮ್ಮ ದೇವರಿಗಿಂತ ದೊಡ್ಡದು ಯಾವುದೂ ಇಲ್ಲ” ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಈ ಪ್ರತಿಮೆಯು ಮರಾಠಾ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಕಡಲ ರಕ್ಷಣೆ ಮತ್ತು ಭದ್ರತೆಯ ಪರಂಪರೆಯನ್ನು ಗೌರವಿಸುವ ಗುರಿಯನ್ನು ಹೊಂದಿದೆ ಮತ್ತು ಆಧುನಿಕ ಭಾರತೀಯ ನೌಕಾಪಡೆಯೊಂದಿಗೆ ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಆದರೆ ಕೆಲ ದಿನಗಳ ಹಿಂದೆ ಪ್ರತಿಮೆ ಅಳವಡಿಸಲಾಗಿದ್ದ ಮೊಳೆಗಳು ತುಕ್ಕು ಹಿಡಿದ ಪರಿಣಾಮ ಪ್ರತಿಮೆ ಕೆಳಕ್ಕೆ ಬಿದ್ದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.