ನವದೆಹಲಿ: ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಪ್ರವಾಹದಿಂದ ತೀವ್ರವಾಗಿ ತತ್ತರಿಸಿದ್ದು, ಜನಜೀವನ ಅಸ್ತವ್ತಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವ ಭರವಸೆ ನೀಡಿದ್ದಾರೆ.
ಭಾರೀ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಮೋದಿ ಇಬ್ಬರು ಮುಖ್ಯಮಂತ್ರಿಗಳಾದ ಆಂಧ್ರಪ್ರದೇಶದ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣದ ಎ ರೇವಂತ್ ರೆಡ್ಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ನಿನ್ನೆಯೂ ಭಾರೀ ಮಳೆ ಸುರಿದಿದೆ. ತೆಲಂಗಾಣದಲ್ಲಿ ಇಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಹೈದರಾಬಾದ್ ಜಿಲ್ಲಾಧಿಕಾರಿಗಳು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ವಿಶೇಷವಾಗಿ ವಿಜಯವಾಡ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೀವನ ತೀವ್ರವಾಗಿ ಬಾಧಿತಗೊಂಡಿದ್ದು, ರಾಜ್ಯದಾದ್ಯಂತ 17,000 ಜನರನ್ನು ಮಳೆ ಪೀಡಿತ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 26 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಎರಡು ರಾಜ್ಯಗಳಲ್ಲಿ ಈಗಾಗಲೇ 12 ತಂಡಗಳನ್ನು ನಿಯೋಜಿಸಲಾಗಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗುತ್ತಿದೆ. 14 ತಂಡಗಳ ಪೈಕಿ ಎಂಟು ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ. NDRF ತಂಡಗಳು ಗಾಳಿ ತುಂಬಬಹುದಾದ ದೋಣಿಗಳು, ಕಂಬಗಳು ಮತ್ತು ಮರಗಳನ್ನು ಕತ್ತರಿಸುವ ಯಂತ್ರಗಳು ಮತ್ತು ಮೂಲಭೂತ ವೈದ್ಯಕೀಯ ನೆರವು ಸಾಧನಗಳೊಂದಿಗೆ ಸಜ್ಜುಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.