ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ.
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಲಾಗಿದೆ, ಅಪರಾಧ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆಯಾಗಿದೆ. ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಕಡ್ಡಾಯವಾಗಿ ಗಮನಹರಿಸಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಬರುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸ ಆಗಬೇಕಿದೆ. ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಕ್ಷೇತ್ರಕ್ಕೆ ಸೇರಿದ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರದ ಉದ್ದೇಶವಾಗಿದೆ. ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸುವ ಉದ್ದೇಶ. ಈ ಹಿಂದೆ ಬಸ್ ಸ್ಟ್ಯಾಂಡ್, ಪಾರ್ಕಿಂಗ್ ಹಾಗೂ ಸ್ಟಾಲ್ಗಳ ನಿರ್ಮಾಣ ಮಾಡಲಾಯಿತು. ಬಾಕಿಯಿರುವ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.