ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಕಾಯಿಲೆ ವ್ಯಾಪಕವಾಗಿ ಹರಡಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ನಡುವೆ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅಲ್ಲದೇ ಸಾಂಕ್ರಾಮಿಕ ಹರಡದಂಎ ತಡೆಯಲು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿದೆ. ಸ್ವಚ್ಛತೆ ಕಾಪಾಡದವರಿಗೆ ದಂಡ ಬೀಳಲಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31 ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಇದರಡಿ ಸೊಳ್ಳೆಗಳ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು. ಆಯಾ ಜಾಗದ ವಹಿಸಿ ಸೊಳ್ಳೆ ಬಾರದಂತೆ ಕ್ರಮ ಬೇಕು. ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಬೇಕು ಮತ್ತು 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿ ಸೂಚನೆ ನೀಡಲಾಗಿದೆ.
ನಗರ ಪ್ರದೇಶದ ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ 400 ರೂಪಾಯಿ ದಂಡ, ಗ್ರಾಮಾಂತರದಲ್ಲಿ ಒಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ.
ರೆಸ್ಟೋರೆಂಟ್, ಹೋಟೆಲ್, ತಿನಿಸುಗಳು, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಮಾರ್ಕೆಟ್, ಪಾರ್ಕ್, ಮಾಲ್, ಸೂಪರ್ ಮಾರ್ಕೆಟ್, ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆ, ಕೈಗಾರಿಕೆ, ಥಿಯೇಟರ್, ಶಾಲೆಗಳು, ವಾಣಿಜ್ಯ ಸಂಸ್ಥೆಗಳು, ಕನ್ವೆಷನ್ ಹಾಲ್ ಇವುಗಳಲ್ಲಿ ನಿಯಮ ಉಲ್ಲಂಘಿಸಿದರೆ ನಗರ ವ್ಯಾಪ್ತಿಯಲ್ಲಿ 1 ಸಾವಿರ ರೂ, ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ ವಿಧಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.