ನವದೆಹಲಿ: ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದದೆ ದೇಶದ ಪ್ರಗತಿಯನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಪಾದಿಸಿದ್ದಾರೆ.
ಮಂಗಳವಾರ ಸಂಜೆ ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಮಹಿಳೆಯರನ್ನು ನೋಡುವ ದೃಷ್ಟಿಕೋನವನ್ನು ಬದಲಾಯಿಸುವ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದಾರೆ ಮತ್ತು ದೇಶವನ್ನು ಮುನ್ನಡೆಸಲು ವಿವಿಧ ಕ್ಷೇತ್ರಗಳಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆ ಅಗತ್ಯವಿದೆ ಎಂದು ಅವರು ತಿಳಿಸಿದರು.
ಮಹಿಳೆಯರು ಈಗ ಉತ್ತೇಜನವನ್ನು ಪಡೆಯುತ್ತಿದ್ದಾರೆ ಆದರೆ ಭವಿಷ್ಯದಲ್ಲಿ ಅವರು ನಡೆಯುತ್ತಾರೆ, ಓಡುತ್ತಾರೆ ಮತ್ತು ಹಾರುತ್ತಾರೆ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡುತ್ತಾರೆ ಎಂದು ರಾಷ್ಟ್ರಪತಿಗಳು ನುಡಿದರು.
ಬಾಂಬೆ ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯು ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪ್ರಯತ್ನದ ಫಲವಾಗಿದೆ ಎಂದ ಮುರ್ಮು ಅವರು, ಡಾ ಭೀಮರಾವ್ ಅಂಬೇಡ್ಕರ್ ಅವರು ಬಾಂಬೆ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರಾಗಿದ್ದರು ಎಂಬುದನ್ನು ನೆನಪಿಸಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.