ನವದೆಹಲಿ: ಎಲ್ಲಾ ಶಂಕಿತ ಮಂಕಿ ಪಾಕ್ಸ್ ಪ್ರಕರಣಗಳನ್ನು ಪರೀಕ್ಷಿಸಲು ಮತ್ತು ದೃಢಗೊಂಡ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸೌಲಭ್ಯಗಳನ್ನು ಗುರುತಿಸಲು ಕೇಂದ್ರ ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.
ಸೋಮವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಜನಸಾಮಾನ್ಯರಲ್ಲಿ ಮಂಕಿ ಪಾಕ್ಸ್ ಬಗ್ಗೆ ಯಾವುದೇ ಅನಗತ್ಯ ಭೀತಿ ಬೇಡ, ಪ್ರಸ್ತುತ ಭಾರತದಲ್ಲಿ ಮಂಕಿ ಪಾಕ್ಸ್ನ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ ಮತ್ತು ಶಂಕಿತ ಪ್ರಕರಣಗಳಲ್ಲಿ ಯಾವುದೇ ಮಾದರಿಗಳು ಪಾಸಿಟಿವ್ ಬಂದಿಲ್ಲ” ಎಂದು ಹೇಳಿದ್ದಾರೆ. ಅಲ್ಲದೇ, ಎಚ್ಚರಿಕೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ವಿಶೇಷವಾಗಿ ಆರೋಗ್ಯ ಸೌಲಭ್ಯ ಮಟ್ಟದಲ್ಲಿ ಪರಿಶೀಲಿಸಲು, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸೌಲಭ್ಯಗಳನ್ನು ಗುರುತಿಸಲು ಮತ್ತು ಅಂತಹ ಸೌಲಭ್ಯಗಳಲ್ಲಿ ಅಗತ್ಯವಿರುವ ಲಾಜಿಸ್ಟಿಕ್ಸ್ ಮತ್ತು ತರಬೇತಿ ಪಡೆದ ಮಾನವ ಸಂಪನ್ಮೂಲಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಅವರು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.
ಶಂಕಿತ, ಸಂಭವನೀಯ, ದೃಢಪಡಿಸಿದ ಪ್ರಕರಣಗಳು, ಸಂಪರ್ಕ ಪತ್ತೆಹಚ್ಚುವಿಕೆ ಮತ್ತು ಇತರ ಕಣ್ಗಾವಲು ಚಟುವಟಿಕೆಗಳನ್ನು ವೇಗಗೊಳಿಸುವಂತೆ ಅವರು ಸಲಹೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.