ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾ ಸರ್ಕಾರದ ಪ್ರಮುಖ ಮಹಿಳಾ ಕೇಂದ್ರಿತ ಉಪಕ್ರಮ ʼಸುಭದ್ರಾ ಯೋಜನೆʼ ಸೇರಿದಂತೆ ಇತರ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದರು.
ಇಂದು 74ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಅವರಿಗೆ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಡಕಟ್ಟು ಜನಾಂಗದ ಜಾನಪದ ನೃತ್ಯಗಳು ಮತ್ತು ಡ್ರಮ್ಬಾಟ್ಗಳೊಂದಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು, ಅಲ್ಲಿ ನೆರೆದಿದ್ದ ಸಾವಿರಾರು ಬೆಂಬಲಿಗರು ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಸುಭದ್ರಾ ಯೋಜನೆಯು ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತದೆ ಮತ್ತು ನಮ್ಮ ‘ನಾರಿ ಶಕ್ತಿ’ಗೆ ಆರ್ಥಿಕ ಸ್ವಾತಂತ್ರ್ಯವನ್ನು ಖಚಿತಪಡಿಸುತ್ತದೆ. ಯೋಜನೆಯಡಿ 21 ರಿಂದ 60 ವರ್ಷದೊಳಗಿನ ಎಲ್ಲಾ ಅರ್ಹ ಮಹಿಳೆಯರು ಐದು ವರ್ಷಗಳ ಅವಧಿಯಲ್ಲಿ 50,000 ರೂಪಾಯಿಗಳನ್ನು ಪಡೆಯುತ್ತಾರೆ” ಎಂದರು.
ಈ ಉಪಕ್ರಮವು ಒಂದು ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ತಮ್ಮ ಭೇಟಿಯ ವೇಳೆ 25 ಲಕ್ಷ 11 ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 1250 ಕೋಟಿ ರೂಪಾಯಿಗಳ ನಿಧಿ ವರ್ಗಾವಣೆಗೆ ಮಾಡಿದರು.
ಇದಕ್ಕೂ ಮುನ್ನ, ಭುವನೇಶ್ವರದ ಗಡಕಾನಾದಲ್ಲಿ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿದ ಮೋದಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರದ 20 ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಯೋಜನೆಯಡಿ ನಿರ್ಮಿಸಿದ ಮನೆಗಳ ಕೀಲಿಕೈಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.