ನವದೆಹಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೋವಿಂದ್ ಸಮಿತಿಯ ವರದಿಗೆ ಸಂಪುಟದ ಒಪ್ಪಿಗೆ ಸಿಕ್ಕಿದೆ.
“ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತು ಅಧ್ಯಯನ ನಡೆಸಲು ಕಳೆದ ಸೆಪ್ಟೆಂಬರ್ನಲ್ಲಿ ಕೇಂದ್ರ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿತ್ತು. ಈ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಯಿತು. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಮಾರ್ಚ್ನಲ್ಲಿ ತನ್ನ ವರದಿಯನ್ನು ಸಲ್ಲಿಸಿತ್ತು.
ಇದೀಗ ಸಂಪುಟವು ಇದಕ್ಕೆ ಅನುಮೋದನೆಯನ್ನು ನೀಡಿದ್ದು, ಮುಂದೆ ಅದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಆದರೆ ಬಿಜೆಪಿ ದೃಢ ಸಂಕಲ್ಪ ತೊಟ್ಟಿರುವ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡರೂ ಅಚ್ಚರಿಯಿಲ್ಲ.
‘ಒಂದು ರಾಷ್ಟ್ರ, ಒಂದು ಚುನಾವಣೆ’ಗಾಗಿ ದೇಶ ಮುಂದೆ ಬರಬೇಕಿದೆ,” ಎಂದು ಮೋದಿ ಕೆಂಪುಕೋಟೆಯ ಮೇಲಿನ ಭಾಷಣದಲ್ಲೂ ಹೇಳಿದ್ದರು. ದೇಶದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳನ್ನು ಪ್ರಧಾನಿ ಒತ್ತಾಯಿಸಿದ್ದರು. ರಾಷ್ಟ್ರೀಯ ಸಂಪನ್ಮೂಲಗಳು ಜನಸಾಮಾನ್ಯರಿಗೆ ಬಳಕೆಯಾಗುವಂತೆ ಪಕ್ಷಗಳನ್ನು ಕೋರಿದ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕನಸನ್ನು ನನಸಾಗಿಸಲು ನಾವು ಮುಂದಾಗಬೇಕು ಎಂದು ಕರೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.