ನವದೆಹಲಿ: 2030 ರ ವೇಳೆಗೆ ಭಾರತವು ತನ್ನ ಆರ್ಥಿಕತೆಯ ಗಾತ್ರವನ್ನು ಸುಲಭವಾಗಿ ದ್ವಿಗುಣಗೊಳಿಸಬಹುದಾಗಿ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಇಂದು ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಬ್ರಹ್ಮಣ್ಯಂ, ಭಾರತ ಈಗ ಸುಮಾರು 3.7 ಟ್ರಿಲಿಯನ್ ಯುಎಸ್ ಡಾಲರ್ ಗಾತ್ರದೊಂದಿಗೆ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. 2047 ರ ವೇಳೆಗೆ ಭಾರತವು ಜನಸಂಖ್ಯೆಯ ದೃಷ್ಟಿಯಿಂದ ವಿಶ್ವದ ಅತ್ಯಂತ ಕಿರಿಯ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಲಿದ್ದು, ಸುಮಾರು 20 ಸಾವಿರ ಯುಎಸ್ ಡಾಲರ್ಗಳ ಯೋಜಿತ ತಲಾ ಆದಾಯದೊಂದಿಗೆ ಸಮೃದ್ಧಿಗೆ ಸಿದ್ಧವಾಗಲಿದೆ ಎಂದಿದ್ದಾರೆ.
ಹವಾಮಾನ ತಂತ್ರಜ್ಞಾನದಲ್ಲಿ ಭಾರತವು ನಾಯಕನಾಗಲು ಹವಾಮಾನ ಬದಲಾವಣೆಯು ಒಂದು ಅವಕಾಶವಾಗಿದೆ ಎಂದು ಅವರು ಹೇಳಿದರು.
ಹಸಿರು ಆರ್ಥಿಕತೆಯತ್ತ ಗಮನಹರಿಸುವ ಅವಶ್ಯಕತೆಯಿದೆ ಮತ್ತು 2070 ರ ವೇಳೆಗೆ ಶೂನ್ಯ ಇಂಗಾಲದ ಹೊರಸೂಸುವಿಕೆಗೆ ಮಾರ್ಗವನ್ನು ಅಭಿವೃದ್ಧಿಪಡಿಸಲು ನೀತಿ ಆಯೋಗವು ಕೆಲಸ ಮಾಡುತ್ತಿದೆ ಎಂದು ಸುಬ್ರಹ್ಮಣ್ಯಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.