ಹೈದರಾಬಾದ್: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದ್ದ ಸಂಗತಿ ಇಡೀ ಹಿಂದೂ ಸಮಾಜವನ್ನು ಘಾಸಿಗೊಳಿಸಿದೆ. ಮತಾಂತರಿ ಜಗನ್ ಮೋಹನ್ ರೆಡ್ಡಿ ಸರ್ಕಾರ ಪವಿತ್ರ ದೇಗುಲವನ್ನು ಅಪವಿತ್ರಗೊಳಿಸಿದ ರೀತಿ ನಿಜಕ್ಕೂ ಬೆಚ್ಚಿ ಬೀಳಿಸುತ್ತಿದೆ. ಆಂಧ್ರದ ಪ್ರಸ್ತುತ ಸರ್ಕಾರ ಈ ಬಗ್ಗೆ ಕಠಿಣ ಕ್ರಮಕೈಗೊಳ್ಳುತ್ತದೆ ಮತ್ತು ಮುಂದೆ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಕಾರ್ಯಾಚರಿಸುತ್ತದೆ ಎಂಬ ಆಶಯವನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಂಧ್ರಪ್ರದೇಶದ ಸಚಿವ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಅವರು, ಇಂತಹ ಘಟನೆಗಳನ್ನು ತಡೆಯಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ಯನ್ನು ಸ್ಥಾಪಿಸುವ ಸಮಯ ಬಂದಿದೆ. ಎಂದಿದ್ದಾರೆ.
ಫೇಸ್ಬುಕ್ ಪೋಸ್ಟ್ ಮಾಡಿರುವ ಅವರು, “ತಿರುಪತಿ ಬಾಲಾಜಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿತ್ತು ಎಂಬ ಸುದ್ದಿಯಿಂದ ನಾವೆಲ್ಲರೂ ತೀವ್ರವಾಗಿ ವಿಚಲಿತರಾಗಿದ್ದೇವೆ. ವೈಸಿಪಿ ಸರ್ಕಾರ ರಚಿಸಿರುವ ಟಿಟಿಡಿ ಮಂಡಳಿಯು ಇದಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದಿದ್ದಾರೆ.
ಅಲ್ಲದೇ ಈ ಘಟನೆ ದೇವಾಲಯಗಳ ಅಪವಿತ್ರತೆ, ಅದರ ಭೂಮಿ ಸಮಸ್ಯೆಗಳು ಮತ್ತು ಇತರ ಧಾರ್ವಿುಕ ಆಚರಣೆಗಳ ಸುತ್ತಲಿನ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಇಡೀ ಭಾರತದಲ್ಲಿರುವ ದೇವಾಲಯಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ಯನ್ನು ಸ್ಥಾಪಿಸುವ ಸಮಯ ಬಂದಿದೆ. ರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ನೀತಿ ನಿರೂಪಕರು, ಧಾರ್ಮಿಕ ಮುಖ್ಯಸ್ಥರು, ನ್ಯಾಯಾಂಗ, ನಾಗರಿಕರು, ಮಾಧ್ಯಮಗಳು ಈ ಬಗ್ಗೆ ಚಿಂತಿಸಬೇಕು ಮತ್ತು ಅವರವರ ಕ್ಷೇತ್ರಗಳಲ್ಲಿ ಚರ್ಚೆ ನಡೆಯಬೇಕು ಎಂದಿದ್ದಾರೆ.
‘ಸನಾತನ ಧರ್ಮ’ವನ್ನು ಯಾವುದೇ ರೂಪದಲ್ಲಿ ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
We are all deeply disturbed with the findings of animal fat (fish oil,pork fat and beef fat )mixed in Tirupathi Balaji Prasad. Many questions to be answered by the TTD board constituted by YCP Govt then. Our Govt is committed to take stringent action possible.
But,this throws… https://t.co/SA4DCPZDHy— Pawan Kalyan (@PawanKalyan) September 20, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.