ನವದೆಹಲಿ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು ಉದ್ಯಮಿಗಳಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರೆ ನೀಡಿದರು.
ವಾರ್ಧಾದ ಸ್ವಾವಲಂಬಾಯಿ ಮೈದಾನದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ವರ್ಚುವಲ್ ಆಗಿ ಒಂದು ಲಕ್ಷ ಕುಶಲಕರ್ಮಿಗಳಿಗೆ ಡಿಜಿಟಲ್ ಸ್ಕಿಲ್ ಐಡಿ ಕಾರ್ಡ್ಗಳನ್ನು ವಿತರಿಸಿದರು ಮತ್ತು 75,000 ಫಲಾನುಭವಿಗಳಿಗೆ ಸಾಲವನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ಸಾಂಪ್ರದಾಯಿಕ ಉದ್ಯೋಗದ ಉತ್ಪಾದಕತೆಯನ್ನು ಹೆಚ್ಚಿಸುವ ಸಲುವಾಗಿ 6.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಆಧುನಿಕ ಯಂತ್ರೋಪಕರಣಗಳು ಮತ್ತು ಟೂಲ್ಕಿಟ್ಗಳನ್ನು ಒದಗಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1400 ಕೋಟಿ ರೂಪಾಯಿ ಸಾಲವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಈ ಯೋಜನೆಯ ಫಲಾನುಭವಿಗಳು ಹೆಚ್ಚಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಾರೆ ಎಂದು ಅವರು ಒತ್ತಿ ಹೇಳಿದರು.
ಈ ವೇಳೆ ಪ್ರಧಾನಮಂತ್ರಿ ಅವರು ಮಹಾರಾಷ್ಟ್ರ ಸರ್ಕಾರದ ಎರಡು ಯೋಜನೆಗಳನ್ನು ಪ್ರಾರಂಭಿಸಿದರು, ಇದರಲ್ಲಿ ಯುವಕರ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ ಕೇಂದ್ರ’ ಮತ್ತು ಮಹಿಳೆಯರು ನೇತೃತ್ವದ ಸ್ಟಾರ್ಟ್ಅಪ್ಗಳಿಗೆ ಸ್ವಾವಲಂಬಿಯಾಗಲು ಸಹಾಯ ಮಾಡಲು ‘ಪುಣ್ಯಶ್ಲೋಕ್ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆ’ ಸೇರಿವೆ.
ಕಾರ್ಯಕ್ರಮದ ಸಂದರ್ಭದಲ್ಲಿ, ಪಶ್ಚಿಮ ವಿದರ್ಭದ ಅಮರಾವತಿ ಜಿಲ್ಲೆಯಲ್ಲಿ ಸ್ಥಾಪಿಸಲಾಗುವ ಮತ್ತು 1,000 ಹೆಕ್ಟೇರ್ಗಳಲ್ಲಿ ಹರಡಿರುವ PM MITRA ಟೆಕ್ಸ್ಟೈಲ್ ಪಾರ್ಕ್ಗೆ ಪ್ರಧಾನಿ ಅಡಿಪಾಯ ಹಾಕಿದರು. ಈ ಯೋಜನೆಯು 100000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಮತ್ತು 10 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.