ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವ ಬಗ್ಗೆ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗಳ ದೇಗುಲಗಳಲ್ಲಿ ಪ್ರಸಾದ ಸೇರಿ ವಿವಿಧ ದಾಸೋಹಗಳಿಗೆ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಇಂದು ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚಿಸಲಾಗಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾದ ಬೆನ್ನಲ್ಲಿಯೇ ಇತರೆ ಖಾಸಗಿ ಕಂಪನಿಗಳ ಕಡಿಮೆ ದರದ ತುಪ್ಪಗಳನ್ನು ಬಳಸದಂತೆ ದೇಗಲಗಳಿಗೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.