ಗುವಾಹಟಿ: ಮ್ಯಾನ್ಮಾರ್ನಿಂದ ಸುಮಾರು 900 ಸುಶಿಕ್ಷಿತ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮಣಿಪುರದ ಮುಖ್ಯಮಂತ್ರಿಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಶುಕ್ರವಾರ ಖಚಿತಪಡಿಸಿದ್ದಾರೆ.
ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಪೊಲೀಸ್ ಇಲಾಖೆಯು ಈ ಆತಂಕಕಾರಿ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ, ಸಂಭಾವ್ಯ ಬೆದರಿಕೆಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದಿದ್ದಾರೆ.
ಸೆಪ್ಟೆಂಬರ್ 28 ರಂದು ಸಂಘಟಿತ ದಾಳಿಯನ್ನು ಉಗ್ರರು ಯೋಜಿಸಿದ್ದಾರೆ ಎಂದು ಇತ್ತೀಚಿಗೆ ಗುಪ್ತಚರ ಇಲಾಖೆ ಮಾಹಿತಿಗೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆಯಾಗಿ ಸಿಂಗ್ ಅವರ ಹೇಳಿಕೆಗಳು ಬಂದಿವೆ. ಇದಕ್ಕೆ ಸಂಬಂಧಿಸಿದಂತೆ ಗಂಭೀರ ಭದ್ರತಾ ಕಾಳಜಿಗಳನ್ನು ಪರಿಹರಿಸಲು ಸೇನೆ, ಅಸ್ಸಾಂ ರೈಫಲ್ಸ್ ಮತ್ತು CRPF ಸೇರಿದಂತೆ ವಿವಿಧ ಭದ್ರತಾ ಏಜೆನ್ಸಿಗಳ ಉನ್ನತ ಅಧಿಕಾರಿಗಳನ್ನು ಒಳಗೊಂಡ ಸ್ಟ್ರಾಟೆಜಿಕ್ ಆಪರೇಷನ್ ಗ್ರೂಪ್ ಸಭೆಯನ್ನು ಸೆಪ್ಟೆಂಬರ್ 18 ರಂದು ಕರೆಯಲಾಗಿದೆ ಎಂದಿದ್ದಾರೆ.
“ಗಡಿ ಭದ್ರತಾ ಪಡೆಗಳು, ವಿಶೇಷವಾಗಿ ಅಸ್ಸಾಂ ರೈಫಲ್ಸ್, ಮ್ಯಾನ್ಮಾರ್ ಗಡಿಯಲ್ಲಿರುವ ಜಿಲ್ಲೆಗಳಾದ ಫರ್ಜಾಲ್, ಚುರಾಚಂದ್ಪುರ ಮತ್ತು ಕಾಮ್ಜಾಂಗ್ನಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ಇರಿಸಲಾಗಿದೆ” ಎಂದು ಸಿಂಗ್ ಹೇಳಿದರು. ಉಗ್ರಗಾಮಿಗಳು ಪರವಾನಗಿ ಪಡೆದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಹೊಂದಿರಬಹುದಾದ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡುವ ತುರ್ತು ಅಗತ್ಯವನ್ನು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.