ಕೊಲಂಬೊ: ಸುಮಾರು 24 ವರ್ಷಗಳ ಬಳಿಕ ಶ್ರೀಲಂಕಾ ಮತ್ತೆ ಮಹಿಳಾ ಪ್ರಧಾನಿಯನ್ನು ಪಡೆದುಕೊಂಡಿದೆ. ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೊ ಬಂಡಾರನಾಯಕೆ ನಂತರ ಈ ಹುದ್ದೆ ಅಲಂಕರಿಸಿದ ಮೊದಲ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್ (ಎನ್ಪಿಪಿ) ನಾಯಕಿಯಾದ ಇವರು ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಹರಿಣಿ ಅವರು ತಮ್ಮನ್ನು ಒಳಗೊಂಡಂತೆ ನಾಲ್ವರ ಸಂಪುಟವನ್ನು ನೇಮಿಸಿದ್ದಾರೆ. ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಹೂಡಿಕೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಅಧ್ಯಕ್ಷೀಯ ಚುನಾವಣೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಧಾನಿ ದಿನೇಶ್ ಗುಣವರ್ಧನ ಅವರ ಜಾಗಕ್ಕೆ ಹರಿಣಿ ಅವರ ನೇಂಕವಾಗಿದೆ.
ಹಕ್ಕುಗಳ ಕಾರ್ಯಕರ್ತೆ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯಾದ ಅಮರಸೂರ್ಯ ಅವರು 1994 ರಲ್ಲಿ ದಿವಂಗತ ಸಿರಿಮಾವೊ ಬಂಡಾರನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನಿ ಮತ್ತು ದೇಶದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ.
ಎನ್ಪಿಪಿ ಸಂಸದರಾದ ವಿಜಿತಾ ಹೆರಾತ್ ಮತ್ತು ಲಕ್ಷ್ಮಣ್ ನಿಪುಣರಾಚಿ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.