ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಧ್ವಜ ಮತ್ತು ಆರ್ಟಿಕಲ್ 370 ಮತ್ತು 35 ಎ ಅನ್ನು ಮರುಸ್ಥಾಪಿಸುವ ನ್ಯಾಷನಲ್ ಕಾನ್ಫರೆನ್ಸ್ನ ಬೇಡಿಕೆಯನ್ನು ನೀವು ಬೆಂಬಲಿಸುತ್ತೀರಾ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಮ್ಗಢ ವಿಧಾನಸಭಾ ಕ್ಷೇತ್ರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, “ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಧ್ವಜ ಹೊಂದುವ ನ್ಯಾಷನಲ್ ಕಾನ್ಫರೆನ್ಸ್ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸುತ್ತಾರಾ ಎಂದು ನಾನು ಕೇಳಲು ಬಯಸುತ್ತೇನೆ? ಪ್ರತ್ಯೇಕ ಧ್ವಜ ಹೊಂದುವ, ಆರ್ಟಿಕಲ್ 370 ಮತ್ತು 35 ಎ ಅನ್ನು ಮರಳಿ ತರಲು ಮತ್ತು ಜಮ್ಮು-ಕಾಶ್ಮೀರವನ್ನು ಅಶಾಂತಿ ಮತ್ತು ಭಯೋತ್ಪಾದನೆಯ ಯುಗಕ್ಕೆ ತಳ್ಳುವ ನ್ಯಾಷನಲ್ ಕಾನ್ಫರೆನ್ಸ್ ಉದ್ದೇಶವನ್ನು ನೀವು ಬೆಂಬಲಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.
“ಕಾಶ್ಮೀರದ ಯುವಕರನ್ನು ಬಲಿಕೊಟ್ಟು ಪಾಕಿಸ್ತಾನದೊಂದಿಗೆ ಮಾತನಾಡುವ ಮೂಲಕ ಪ್ರತ್ಯೇಕತಾವಾದವನ್ನು ಮತ್ತೆ ಉತ್ತೇಜಿಸುವುದನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ?” ಎಂದು ಸಿಎಂ ಯೋಗಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿಯನ್ನು ಕಟುವಾಗಿ ಟೀಕಿಸಿದರು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದ ಹಳೆಯ ಪಕ್ಷ ಕಾಂಗ್ರೆಸ್ ಎಂದು ನೆನಪಿಸಿದರು.
ಈ ಮಧ್ಯೆ, ಕಥುವಾದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರು, ”ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರಗಿನವರು ಆಡಳಿತ ನಡೆಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಿದ ಪಕ್ಷವೊಂದಿದ್ದರೆ ಅದು ಕಾಂಗ್ರೆಸ್ ಎಂಬುದನ್ನು ಅವರು ಹೇಳುವುದಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.