ನವದೆಹಲಿ: ಖ್ಯಾತ ಸಿನಿಮಾ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಮುಂದಿನ ತಿಂಗಳು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೆಜೆಂಡರಿ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
ಕೋಲ್ಕತ್ತಾದ ಬೀದಿಗಳಿಂದ ಸಿನಿಮಾದ ಉತ್ತುಂಗದವರೆಗೆ ಮಿಥುನ್ ದಾ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಯುವಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಚಕ್ರವರ್ತಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ಉನ್ನತ ಪ್ರಶಸ್ತಿಯನ್ನು ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಅಕ್ಟೋಬರ್ 8 ರಂದು ನಡೆಯುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟನಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಸಿನಿಮಾ ಕ್ಷೇತ್ರದಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿಯಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸ್ಥಾಪಿಸಿದ ಸಂಸ್ಥೆಯಾದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಇದನ್ನು ವಾರ್ಷಿಕವಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನೀಡಲಾಗುತ್ತದೆ. ಭಾರತೀಯ ಚಿತ್ರರಂಗದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಸ್ವೀಕರಿಸುವವರನ್ನು ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ದಾದಾಸಾಹೇಬ್ ಫಾಲ್ಕೆಯವರ ಕೊಡುಗೆಯನ್ನು ಸ್ಮರಿಸುವುದಕ್ಕಾಗಿ ಈ ಪ್ರಶಸ್ತಿಯನ್ನು ಮೊದಲ ಬಾರಿಗೆ 1969 ರಲ್ಲಿ ನೀಡಲಾಯಿತು.
Mithun Da’s remarkable cinematic journey inspires generations!
Honoured to announce that the Dadasaheb Phalke Selection Jury has decided to award legendary actor, Sh. Mithun Chakraborty Ji for his iconic contribution to Indian Cinema.
🗓️To be presented at the 70th National…
— Ashwini Vaishnaw (@AshwiniVaishnaw) September 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.