ಮುಂಬಯಿ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಅಧಿಕೃತ ಆದೇಶ ಹೊರಡಿಸಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು, ಗೋವು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ.
ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳ ಬಗ್ಗೆ ಉಲ್ಲೇಖಿಸಿರುವ ಮಹಾರಾಷ್ಟ್ರ ಸರ್ಕಾರವು, ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಹೆಚ್ಚಿಸಿದರೆ ಅದರ ಮೂಲಕ ಮನುಷ್ಯನಿಗೆ ಮುಖ್ಯ ಆಹಾರದಲ್ಲಿ ಪೋಷಣೆ ಸಿಗುತ್ತದೆ. ಹಸು ಮತ್ತು ಅದರ ಉತ್ಪನ್ನಗಳಿಗೆ ಸಂಬಂಧಿಸಿದ ಸಾಮಾಜಿಕ-ಆರ್ಥಿಕ ಅಂಶಗಳ ಜೊತೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಪರಿಗಣಿಸಿ, ಸರ್ಕಾರವು ಸ್ಥಳೀಯ ಹಸುಗಳನ್ನು ಸಾಕಲು ಪಶುಪಾಲಕರನ್ನು ಪ್ರೋತ್ಸಾಹಿಸಲಿದೆ ಎಂದಿದೆ.
ಭಾರತದಲ್ಲಿ, ಗೋವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ ಮತ್ತು ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸಲಾಗುತ್ತದೆ. ಇದಲ್ಲದೆ, ಇದರ ಹಾಲು, ಮೂತ್ರ ಮತ್ತು ಸಗಣಿಗಳನ್ನು ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಹೇರಳವಾಗಿ ಬಳಸಲಾಗುತ್ತದೆ. ಹಸುವಿನ ಹಾಲು ಮಾನವ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ, ಗೋಮೂತ್ರವು ಅನೇಕ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.