ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುವತೆ ಎಚ್ಚರಿಸಿದೆ. ಇಸ್ರೇಲಿ ಕ್ಷಿಪಣಿ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತನಾದ ನಂತರ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಕೆಲವೇ ಗಂಟೆಗಳಲ್ಲಿ ಈ ಸಲಹೆಯನ್ನು ನೀಡಲಾಗಿದೆ.
ಇರಾನ್ ಬೆದರಿಕೆ ಹಾಕಿದ ಬೆನ್ನಲ್ಲೇ 180 ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಉಡಾಯಿಸಿತು ಎಂದು ಇರಾನ್ನ ರಾಜ್ಯ ಮಾಧ್ಯಮ ದೃಢಪಡಿಸಿದೆ. ಇಸ್ರೇಲ್ನ ರಕ್ಷಣಾ ಪಡೆಗಳು ಅದರ ಪ್ರಜೆಗಳು ಈಗಾಗಲೇ ಬಂಕರ್ಗಳಲ್ಲಿದ್ದಾರೆ, ದಾಳಿಯಿಂದ ಆಶ್ರಯ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸುಮಾರು ವರ್ಷಗಳ ಕಾಲದ ಸಂಘರ್ಷವು ಟೆಲ್ ಅವಿವ್ ಹಿಜ್ಬುಲ್ಲಾವನ್ನುಗುರಿಯಾಗಿಸುವುದರೊಂದಿಗೆ ತೀವ್ರಗೊಂಡಿದೆ. ಇರಾನ್ ಉಗ್ರಗಾಮಿ ಸಂಘಟನೆ ಹಮಾಸ್ ಅನ್ನು ಬೆಂಬಲಿಸುತ್ತದೆ. ಕಳೆದ ವಾರ ಕೊಲ್ಲಲ್ಪಟ್ಟ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿತ್ತು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸುವುದಾಗಿ ಇಸ್ರೇಲ್ಗೆ ಎಚ್ಚರಿಕೆ ನೀಡಿತ್ತು.
“ಈ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಲು ಸೂಚಿಸಲಾಗಿದೆ” ಎಂದು ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಸಲಹೆಯಲ್ಲಿ ತಿಳಿಸಿದೆ.
“ದಯವಿಟ್ಟು ಜಾಗರೂಕರಾಗಿರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಿ” ಎಂದಿದೆ.
ಭಾರತೀಯ ಪ್ರಜೆಗಳು ತುರ್ತು ಸಂದರ್ಭದಲ್ಲಿ ಕರೆ ಮಾಡಬಹುದಾದ ಹೆಲ್ಪ್ಲೈನ್ ಸಂಖ್ಯೆಗಳನ್ನು ರಾಯಭಾರ ಕಚೇರಿಯು ಹಂಚಿಕೊಂಡಿದೆ. “ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ನಮ್ಮ ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ” ಎಂದು ಅದು ಹೇಳಿದೆ, “ಯಾವುದೇ ತುರ್ತು ಸಂದರ್ಭದಲ್ಲಿ, ದಯವಿಟ್ಟು ರಾಯಭಾರ ಕಚೇರಿಯ 24×7 ಸಹಾಯವಾಣಿ – +972- 547520711 ಮತ್ತು +972-543278392 ಸಂಪರ್ಕಿಸಿ” ಎಂದಿದೆ.
📢*IMPORTANT ADVISORY FOR INDIAN NATIONALS IN ISRAEL*
Link : https://t.co/OEsz3oUtBJ pic.twitter.com/llt83IwIZ0
— India in Israel (@indemtel) October 1, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.