ನವದೆಹಲಿ: ವೀರ ಸಾವರ್ಕರ್ ಅವರು ದನದ ಮಾಂಸ ಸೇವಿಸುತ್ತಿದ್ದರು ಎಂದು ಹೇಳಿಕೆ ನೀಡುವ ಮೂಲಕ ಸಚಿ ದಿನೇಶ್ ಗುಂಡುರಾವ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಅನುರಾಗ್ ಠಾಕೂರ್, ಕಾಂಗ್ರೆಸ್ ಅನ್ನು ‘ಸುಳ್ಳಿನ ಕಾರ್ಖಾನೆ’ ಎಂದು ಉಲ್ಲೇಖಿಸಿದ್ದಾರೆ ಮತ್ತು ಸಾವರ್ಕರ್ ಅವರ ಬಗ್ಗೆ ಯಾವುದೇ ಅಗೌರವವನ್ನು ಭಾರತ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಘನತೆಗೆ ಮಸಿ ಬಳಿಯಲು ಜಗತ್ತಿನಾದ್ಯಂತ ಸುಳ್ಳುಗಳನ್ನು ಹರಡುತ್ತಿದ್ದಾರೆ ಮತ್ತು ಅವರ ಪಕ್ಷವು ಈಗ ಸ್ವಾತಂತ್ರ್ಯ ಹೋರಾಟಗಾರರನ್ನು ನಿಂದಿಸಲು ಪ್ರಾರಂಭಿಸಿದೆ ಎಂದಿದ್ದಾರೆ
“ವೀರ್ ಸಾವರ್ಕರ್ ಅವರ ಅಗೌರವವನ್ನು ಭಾರತ ಸಹಿಸುವುದಿಲ್ಲ. ಕಾಂಗ್ರೆಸ್ ನಾಯಕರು ವೀರ್ ಸಾವರ್ಕರ್ ಅವರಿಂದ ಏನನ್ನೂ ಕಲಿತಿಲ್ಲ. ಕೇವಲ ಅಧಿಕಾರವನ್ನು ಮಾತ್ರ ಅನುಭವಿಸಿದ್ದಾರೆ” ಎಂದು ಠಾಕೂರ್ ಕಿಡಿಕಾರಿದ್ದಾರೆ.
ಇದೇ ವೇಳೆ, ವಿ.ಡಿ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಪ್ರತಿಕ್ರಿಯಿಸಿ, ಸಾವರ್ಕರ್ ಅವರು ಗೋಸಂರಕ್ಷಣೆಯನ್ನು ಬಲವಾಗಿ ಬೆಂಬಲಿಸಿದ್ದಾರೆ ಮತ್ತು ಯಾವುದೇ ಕಾಂಗ್ರೆಸ್ ನಾಯಕರು ಅವರನ್ನು ಅವಮಾನಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮಾರ್ಚ್ನಲ್ಲಿ, ರಾಹುಲ್ ಗಾಂಧಿ ಅವರು ತಮ್ಮ “ರಾಜಕೀಯ ಲಾಭಕ್ಕಾಗಿ” ದಿವಂಗತ ಸಾವರ್ಕರ್ ಅವರ ಕೇಸರಿ ಸಿದ್ಧಾಂತದ ಮೇಲೆ ಪದೇ ಪದೇ ಅವಮಾನ ಮಾಡುತ್ತಿದ್ದಾರೆ ಎಂದು ರಂಜಿತ್ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.