ಲಕ್ನೋ: “ಲವ್ ಜಿಹಾದ್” ಉದ್ದೇಶವು ಜನಸಂಖ್ಯಾ ಯುದ್ಧ ಮತ್ತು ಅಂತರಾಷ್ಟ್ರೀಯ ಪಿತೂರಿಯ ಮೂಲಕ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಕೆಲವು ಸಮಾಜ ವಿರೋಧಿ ಅಂಶಗಳಿಂದ ಭಾರತದ ವಿರುದ್ಧ ಪ್ರಾಬಲ್ಯವನ್ನು ಸ್ಥಾಪಿಸುವುದಾಗಿದೆ ಎಂದು ಉತ್ತರಪ್ರದೇಶದ ಸ್ಥಳೀಯ ನ್ಯಾಯಾಲಯ ಹೇಳಿದೆ.
ಅಕ್ರಮ ಮತಾಂತರಕ್ಕಾಗಿ ಹಿಂದೂ ಹೆಣ್ಣುಮಕ್ಕಳನ್ನು ಪ್ರೀತಿಗೆ ಬೀಳಿಸಿ ಆಮಿಷವೊಡ್ಡಲಾಗುತ್ತಿದೆ ಮತ್ತು ಭಾರತದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿರುವಂತಹ ಪರಿಸ್ಥಿತಿಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ಫಾಸ್ಟ್ ಟ್ರ್ಯಾಕ್ ಕೋರ್ಟ್) ರವಿಕುಮಾರ್ ದಿವಾಕರ್ ಹೇಳಿದ್ದಾರೆ.
ಅಕ್ರಮ ಮತಾಂತರಗಳು ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟುಮಾಡುತ್ತವೆ. ಸುಳ್ಳು ಗುರುತಿನ ಮೂಲಕ ಸಂಬಂಧ ಬೆಳೆಸಿ ಮತಾಂತರಕ್ಕೆ ಬಲವಂತಪಡಿಸಿದ ಪ್ರಕರಣವನ್ನು ಆಲಿಸಿದ ಸಂದರ್ಭದಲ್ಲಿ ಅವರು ಈ ಅಭಿಪ್ರಾಯಪಟ್ಟಿದ್ದಾರೆ.
‘‘ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪರಿಸ್ಥಿತಿಗಳನ್ನು ಭಾರತದಲ್ಲಿ ಸೃಷ್ಟಿಸುವ ಸಂಚು ನಡೆಯುತ್ತಿದೆ’’ ಎಂದು ನ್ಯಾಯಾಧೀಶ ದಿವಾಕರ್ ಎಚ್ಚರಿಸಿದ್ದಾರೆ.
25 ವರ್ಷದ ಮೊಹಮ್ಮದ್ ಅಲಿಮ್ಗೆ ಜೀವಾವಧಿ ಶಿಕ್ಷೆ ವಿಧಿಸುವಾಗ ನ್ಯಾಯಾಧೀಶರು ಈ ಹೇಳಿಕೆಗಳನ್ನು ನೀಡಿದ್ದಾರೆ. ಈತ ತನ್ನ ನಿಜವಾದ ಗುರುತನ್ನು ಮರೆಮಾಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಹಾಕಿದ ಪ್ರಕರಣದಲ್ಲಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆತನ ಅಪರಾಧಗಳಲ್ಲಿ ಸಹಾಯ ಮಾಡಿದ್ದಕ್ಕಾಗಿ ಅವನ 65 ವರ್ಷದ ತಂದೆಗೂ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ನಗರದಲ್ಲಿ ಕಂಪ್ಯೂಟರ್ ಕೋರ್ಸ್ ಓದುತ್ತಿದ್ದ 20 ವರ್ಷದ ಯುವತಿ ಈ ಪ್ರಕರಣದ ದೂರುದಾರಳಾಗಿದ್ದಾಳೆ. ದೇವರ್ನಿಯಾ ಪ್ರದೇಶದ ಜದೌನ್ಪುರ ಗ್ರಾಮದವನಾದ ಅಲಿಮ್ ತಾನು ‘ಆನಂದ್’ ಎಂದು ಪೋಸ್ ಕೊಟ್ಟು ಈಕೆಯನ್ನು ವಂಚಿಸಿದ್ದ.
ತೀರ್ಪಿನ ಪ್ರತಿಗಳನ್ನು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ. ಮಾನಸಿಕ ಒತ್ತಡ ಮತ್ತು ಮದುವೆ ಮತ್ತು ಉದ್ಯೋಗದಂತಹ ಪ್ರಚೋದನೆಗಳ ಮೂಲಕ ಮತಾಂತರಗಳನ್ನು ನಡೆಸಲಾಗುತ್ತಿದೆ ಎಂದು ನ್ಯಾಯಾಲಯವು ಹೇಳಿದೆ. ಅಲ್ಲದೇ ಇದಕ್ಕಾಗಿ ವಿದೇಶದಿಂದ ಹಣ ಬರುತ್ತಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.
ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ಪರಿಹರಿಸದಿದ್ದರೆ, ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ನ್ಯಾಯಾಲಯ ಎಚ್ಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.