ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸತತ 10ನೇ ಬಾರಿಗೆ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ಇಂದು ನಡೆದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 7.2% ರಷ್ಟಾಗುವ ಮುನ್ಸೂಚನೆ ಇದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ತರದೇ 6.5% ನಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಪೈಕಿ 5:1 ರಷ್ಟು ಸದಸ್ಯರು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದರು ಎಂದಿದ್ದಾರೆ.
ಕಳೆದ ಆಗಸ್ಟ್ನಲ್ಲಿ ನಡೆದ ಸಭೆಯಲ್ಲೂ ಆರ್ಬಿಐ ಇದೇ ದರವನ್ನು ಕಾಯ್ದುಕೊಂಡಿತ್ತು. ಕೊನೆಯದ್ದಾಗಿ 2023ರ ಫೆಬ್ರವರಿ 8ರಂದು ನಡೆದ ಸಭೆಯಲ್ಲಿ ಆರ್ಬಿಐ ರೆಪೋ ದರ ಏರಿಕೆ ಮಾಡಿತ್ತು.
ವಾಣಿಜ್ಯ ಬ್ಯಾಂಕ್ಗಳ ರಿಸರ್ವ್ ಬ್ಯಾಂಕ್ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್ ಜಾಸ್ತಿ ಇದ್ದರೆ ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.